ಅಂಜನಾದ್ರಿ ಬೆಟ್ಟದಲ್ಲಿ ರಿಷಬ್ ಶೆಟ್ಟಿ ‘ಜೈ ಹನುಮಾನ್’ ಮುಹೂರ್ತ: ಚಿತ್ರಗಳು ಇಲ್ಲಿವೆ ನೋಡಿ

Updated on: Feb 22, 2026 | 5:19 PM

Rishab Shetty: ಕಾಂತಾರ ಚಾಪ್ಟರ್ 1 ಸೂಪರ್ ಸಕ್ಸಸ್ ಬಳಿಕ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಯವರು ಬಹುನಿರೀಕ್ಷಿತ ಜೈ ಹನುಮಾನ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಪ್ರಶಾಂತ್ ವರ್ಮಾ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟದಲ್ಲಿ ಮುಹೂರ್ತ ನೆರವೇರಿದೆ. ಮುಹೂರ್ತದ ಚಿತ್ರಗಳು ಇಲ್ಲಿವೆ ನೋಡಿ...

1 / 5
ಕಾಂತಾರ ಚಾಪ್ಟರ್ 1 ಯಶಸ್ಸಿನ ಬಳಿಕ ರಿಷಬ್ ಶೆಟ್ಟಿಯವರು ಬಹುನಿರೀಕ್ಷಿತ ಜೈ ಹನುಮಾನ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಪ್ರಶಾಂತ್ ವರ್ಮಾ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟದಲ್ಲಿ ಮುಹೂರ್ತ ನೆರವೇರಿದೆ.

ಕಾಂತಾರ ಚಾಪ್ಟರ್ 1 ಯಶಸ್ಸಿನ ಬಳಿಕ ರಿಷಬ್ ಶೆಟ್ಟಿಯವರು ಬಹುನಿರೀಕ್ಷಿತ ಜೈ ಹನುಮಾನ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಪ್ರಶಾಂತ್ ವರ್ಮಾ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟದಲ್ಲಿ ಮುಹೂರ್ತ ನೆರವೇರಿದೆ.

2 / 5

2 ವರ್ಷಗಳ ಹಿಂದೆ 'ಹನು-ಮ್ಯಾನ್' ಚಿತ್ರ ನಿರ್ದೇಶಿಸಿದ್ದ ಪ್ರಶಾಂತ್ ವರ್ಮಾ ಇದೀಗ ಸೀಕ್ವೆಲ್ ಸಿನಿಮಾ ಮಾಡ್ತಿದ್ದಾರೆ. ತೆಲುಗು ಚಿತ್ರರಂಗದ ಪ್ರಖ್ಯಾತ ಬ್ಯಾನರ್ ಮೈತ್ರಿ ಮೂವೀ ಮೇಕರ್ಸ್‌ನ ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಟೀ ಸಿರೀಸ್ ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದೆ.

3 / 5

ಟೀ ಸಿರೀಸ್ ಮುಖ್ಯಸ್ಥ ಭೂಷಣ್ ಕುಮಾರ್ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದರು. ವಿತರಕ ಅನಿಲ್ ಥಡಾನಿ ಕ್ಯಾಮೆರಾಗೆ ಚಾಲನೆ ನೀಡಿದರು. ರಿಷಬ್ ಶೆಟ್ಟಿ ಜೊತೆ ಪತ್ನಿ ಪ್ರಗತಿ ಶೆಟ್ಟಿ, ನಿರ್ದೇಶಕ‌ ಪ್ರಶಾಂತ್ ವರ್ಮಾ, ನಿರ್ಮಾಪಕರಾದ ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್, ನಟ ತೇಜ್ ಸಜ್ಜಾ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು.‌ ಹನುಮ ಹುಟ್ಟಿದ ಸ್ಥಳ ಅಂಜನಾದ್ರಿಯಲ್ಲಿಯೇ ‘ಜೈ ಹನುಮಾನ್’ ಸಿನಿಮಾಗೆ ಪೂಜೆ ಮಾಡಿರುವುದು ವಿಶೇಷ.

4 / 5

ಈ 'ಜೈ ಹನುಮಾನ್‌' ಸಿನಿಮಾವು ನಿರ್ದೇಶಕ ಪ್ರಶಾಂತ್ ವರ್ಮಾ ಅವರೇ ಕ್ರಿಯೇಟ್ ಮಾಡಿರುವ 'ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್' ಅಡಿಯಲ್ಲಿ ತಯಾರಾಗಲಿದೆ. ಶೀಘ್ರದಲ್ಲೇ ಶೂಟಿಂಗ್ ಶುರುವಾಗಲಿದೆ‌.

5 / 5

ಜೈ ಹನುಮಾನ್ ಸಿನಿಮಾಗೆ ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ, ಎಸ್. ತಿರುನಾವುಕ್ಕರಸು ಛಾಯಾಗ್ರಾಹಣ, ಶ್ರೀನಾಗೇಂದ್ರ ತಂಗಳ ನಿರ್ಮಾಣ ವಿನ್ಯಾಸ ಚಿತ್ರಕ್ಕಿದೆ. ಭಾರಿ ಅದ್ಧೂರಿಯಾಗಿ ಸಿನಿಮಾ ಮೂಡಿಬರಲಿದೆ ಎನ್ನಲಾಗುತ್ತಿದೆ.

Published On - 5:17 pm, Sun, 22 February 26

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us