
ರಜನಿಕಾಂತ್ ಹಾಗೂ ಶಿವರಾಜ್ಕುಮಾರ್ ಅವರು ‘ಜೈಲರ್’ ಸಿನಿಮಾ ಶೂಟಿಂಗ್ಗಾಗಿ ಮಂಗಳೂರಿನಲ್ಲಿ ತಂಗಿದ್ದಾರೆ. ಈ ಚಿತ್ರದ ಪೋಸ್ಟರ್ಗಳು ಈಗಾಗಲೇ ಸಾಕಷ್ಟು ಸದ್ದು ಮಾಡಿವೆ. ಈಗ ಸೆಟ್ನ ಫೋಟೋಗಳು ವೈರಲ್ ಆಗಿವೆ.

ಶಿವರಾಜ್ಕುಮಾರ್ ಹಾಗೂ ರಜನಿಕಾಂತ್ ಬೇರೆ ಬೇರೆ ಚಿತ್ರರಂಗದಲ್ಲಿ ಬ್ಯುಸಿ ಇದ್ದವರು. ಆದರೆ, ಈ ವರೆಗೆ ಇವರು ಒಟ್ಟಾಗಿ ನಟಿಸಿರಲಿಲ್ಲ. ಈಗ ರಜನಿಕಾಂತ್, ಶಿವಣ್ಣ ಒಟ್ಟಿಗೆ ತೆರೆಹಂಚಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಸಾಧು ಕೋಕಿಲ ಕೂಡ ‘ಜೈಲರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ತಮಿಳಿನ ಖ್ಯಾತ ಹಾಸ್ಯ ನಟ ಯೋಗಿ ಬಾಬು ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಸೆಟ್ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

ಖ್ಯಾತ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಸೆಟ್ನ ಫೋಟೋ ಇತ್ತೀಚೆಗೆ ವೈರಲ್ ಆಗಿತ್ತು.