- TV9 Kannada Photo gallery Janhvi Kapoor And JR NTR starrer Devara movie second song will be released on August 5 Cinema news
‘ದೇವರ’ ಚಿತ್ರದಲ್ಲಿ ಹೇಗಿದೆ ನೋಡಿ ಜೂ. ಎನ್ಟಿಆರ್- ಜಾನ್ವಿ ಕಪೂರ್ ಕೆಮಿಸ್ಟ್ರಿ
‘ದೇವರ’ ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಎರಡನೇ ಸಾಂಗ್ ಆಗಸ್ಟ್ 5ರಂದು ರಿಲೀಸ್ ಆಗಲಿದೆ. ಈ ಬಗ್ಗೆ ತಂಡ ಮಾಹಿತಿ ನೀಡಿದೆ. ಈ ಹಾಡಿನಲ್ಲಿ ಜಾನ್ವಿ-ಎನ್ಟಿಆರ್ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.
Updated on: Aug 03, 2024 | 12:54 PM

‘ದೇವರ’ ಸಿನಿಮಾದಲ್ಲಿ ಜೂನಿಯರ್ ಎನ್ಟಿಆರ್ಗೆ ಜಾನ್ವಿ ಕಪೂರ್ ಅವರು ಜೊತೆಯಾಗಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 27ರಂದು ರಿಲೀಸ್ ಆಗಲಿದೆ.

‘ದೇವರ’ ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಎರಡನೇ ಸಾಂಗ್ ಆಗಸ್ಟ್ 5ರಂದು ರಿಲೀಸ್ ಆಗಲಿದೆ. ಈ ಬಗ್ಗೆ ತಂಡ ಮಾಹಿತಿ ನೀಡಿದೆ. ಈ ಹಾಡಿನಲ್ಲಿ ಜಾನ್ವಿ-ಎನ್ಟಿಆರ್ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

‘ದೇವರ’ ರಿಲೀಸ್ಗೆ ಬಾಕಿ ಇರೋದು ಇನ್ನು ಎರಡು ತಿಂಗಳು ಮಾತ್ರ. ಹೀಗಾಗಿ, ಚಿತ್ರದ ಪ್ರಚಾರದಲ್ಲಿ ತಂಡ ಬ್ಯುಸಿ ಆಗಿದೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ನಿರೀಕ್ಷೆ ಮಾಡಲಾಗುತ್ತಿದೆ.

ಜಾನ್ವಿ ಕಪೂರ್ ಅವರು ನಟಿಸುತ್ತಿರುವ ಮೊದಲು ತೆಲುಗು ಸಿನಿಮಾ ಇದು. ಈ ಕಾರಣಕ್ಕೆ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಈ ಸಿನಿಮಾದಲ್ಲಿ ಅವರ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಅನ್ನೋ ಕುತೂಹಲ ಮೂಡಿದೆ.

‘ಆರ್ಆರ್ಆರ್’ ಬಳಿಕ ಜೂನಿಯರ್ ಎನ್ಟಿಆರ್ ಒಪ್ಪಿಕೊಂಡ ಮೊದಲ ಸಿನಿಮಾ ಇದು. ಕೊರಟಾಲ ಶಿವ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ರಾಜೇಶ್ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.
Read More



