Updated on: Jan 18, 2022 | 7:02 PM
ಬಾಲಿವುಡ್ನಲ್ಲಿ ಜಾನ್ವಿ ಕಪೂರ್ ಅವರು ನಿಧಾನಕ್ಕೆ ನೆಲೆ ಕಂಡುಕೊಳ್ಳುತ್ತಿದ್ದಾರೆ. ಶ್ರೀದೇವಿ ಪುತ್ರಿ ಎಂಬ ಕಾರಣಕ್ಕೆ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ.
ಆದರೆ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಪಡೆಯುವುದು ಇನ್ನೂ ಬಾಕಿ ಇದೆ. ಅವರ ನಟನೆಯ ಸಿನಿಮಾಗಳು ಅಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿಲ್ಲ.
ಈ ಮಧ್ಯೆ, ಅವರು ಹಾಟ್ ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ.
ಸದ್ಯ ಜಾನ್ವಿ ಕಪೂರ್ ಕೈಯಲ್ಲಿ ಅನೇಕ ಆಫರ್ಗಳಿವೆ. ಇದೇ ಮೊದಲ ಬಾರಿಗೆ ಅವರು ತಮ್ಮ ತಂದೆ ಬೋನಿ ಕಪೂರ್ ನಿರ್ಮಾಣ ಮಾಡಲಿರುವ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಆ ಚಿತ್ರಕ್ಕೆ ‘ಮಿಲಿ’ ಎಂದು ಹೆಸರು ಇಡಲಾಗಿದೆ. ಅಪ್ಪನ ಜತೆ ಕೆಲಸ ಮಾಡಲು ಅವಕಾಶ ಸಿಕ್ಕಿರುವುದಕ್ಕೆ ಅವರು ಖುಷಿ ವ್ಯಕ್ತಪಡಿಸಿದ್ದಾರೆ.