Updated on:Nov 12, 2021 | 2:10 PM
ಖ್ಯಾತ ನಟಿ ಶ್ರೀದೇವಿ ಮಗಳು ಜಾನ್ವಿ ಕಪೂರ್ ಬಾಲಿವುಡ್ನಲ್ಲಿ ಮಿಂಚುತ್ತಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ. ಜಾನ್ವಿಗೆ ಹೇಳಿಕೊಳ್ಳುವಂಥ ದೊಡ್ಡ ಯಶಸ್ಸು ಸಿಗದೇ ಇದ್ದರೂ ಸ್ಟಾರ್ ಕಿಡ್ ಎನ್ನುವ ಕಾರಣಕ್ಕೆ ದೊಡ್ಡ ಮಟ್ಟದಲ್ಲಿ ಬೇಡಿಕೆ ಇದೆ.
ದೋಸ್ತಾನಾ 2’ ‘ಗುಡ್ ಲಕ್ ಜೆರ್ರಿ’ ಮತ್ತು ‘ಮಿಲಿ’ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಈ ಎರಡೂ ಸಿನಿಮಾಗಳ ಶೂಟಿಂಗ್ ಭರದಿಂದ ಸಾಗಿದೆ.
ಶೂಟಿಂಗ್ ಮಧ್ಯೆ ಜಾನ್ವಿ ವಿಶ್ವ ಸುತ್ತುವ ಕೆಲಸವನ್ನೂ ಮಾಡುತ್ತಿದ್ದಾರೆ. ನಾನಾ ಕಡೆಗಳಲ್ಲಿ ಪ್ರವಾಸಕ್ಕೆ ತೆರಳಿ, ಕುಟುಂಬ ಹಾಗೂ ಫ್ರೆಂಡ್ಸ್ ಜತೆ ಕಾಲ ಕಳೆಯುತ್ತಿದ್ದಾರೆ.
ಜಾನ್ವಿ ಈಗ ಪ್ರವಾಸಕ್ಕೆ ತೆರಳಿದ್ದಾರೆ. ಚಿಲ್ ಮೋಡ್ನಲ್ಲಿ ಅವರಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಈ ಫೋಟೋಗಳು ಸಾಕಷ್ಟು ವೈರಲ್ ಆಗುತ್ತಿವೆ. ಅವರ ಹಾಟ್ ಲುಕ್ ನೋಡಿ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ.
ಚಿಲ್ಲಿಂಗ್ ಮೋಡ್ನಲ್ಲಿ ಜಾನ್ವಿ ಕಪೂರ್
Published On - 2:10 pm, Fri, 12 November 21