
ಬಾಲಿವುಡ್ನಲ್ಲಿ ಜಾನ್ವಿ ಕಪೂರ್ ಅವರು ನಿಧಾನಕ್ಕೆ ನೆಲೆ ಕಂಡುಕೊಳ್ಳುತ್ತಿದ್ದಾರೆ. ಶ್ರೀದೇವಿ ಪುತ್ರಿ ಎಂಬ ಕಾರಣಕ್ಕೆ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಆದರೆ, ಹೇಳಿಕೊಳ್ಳುವಂತಹ ಯಶಸ್ಸು ಅವರ ಕೈ ಹಿಡಿದಿಲ್ಲ.

ಈ ಮಧ್ಯೆ, ಅವರು ಹಾಟ್ ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ. ಸದ್ಯ, ಹೊಸ ಪೋಸ್ಟ್ ಹಂಚಿಕೊಂಡಿರುವ ಜಾನ್ವಿ ಕಪೂರ್ ಪಡ್ಡೆಗಳ ನಿದ್ದೆ ಕದ್ದಿದ್ದಾರೆ. ಅವರ ಈ ಲುಕ್ ವೈರಲ್ ಆಗುತ್ತಿದೆ.

ಹಾವಿನ ಚರ್ಮದ ಬಣ್ಣದ ಮಾದರಿಯ ಡ್ರೆಸ್ ಧರಿಸಿದ್ದಾರೆ ಜಾನ್ವಿ. ಈ ಫೋಟೋ ನೋಡಿದ ಅಭಿಮಾನಿಗಳು ರೆಡ್ ಹಾರ್ಟ್ ಎಮೋಜಿ ಪೋಸ್ಟ್ ಮಾಡುತ್ತಿದ್ದಾರೆ. ಇನ್ನೂ ಕೆಲವರು ಕಣ್ಣಲ್ಲಿ ಹೃದಯ ಇರುವ ಎಮೋಜಿ ಹಾಗೂ ಫೈರ್ ಎಮೋಜಿಯನ್ನು ಕಮೆಂಟ್ ಬಾಕ್ಸ್ನಲ್ಲಿ ಹಾಕುತ್ತಿದ್ದಾರೆ.

ಸದ್ಯ ಜಾನ್ವಿ ಕಪೂರ್ ಕೈಯಲ್ಲಿ ಅನೇಕ ಆಫರ್ಗಳಿವೆ. ಇದೇ ಮೊದಲ ಬಾರಿಗೆ ಅವರು ತಮ್ಮ ತಂದೆ ಬೋನಿ ಕಪೂರ್ ನಿರ್ಮಾಣ ಮಾಡಲಿರುವ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಹೋಮ್ ಬ್ಯಾನರ್ನಲ್ಲಿ ನಟಿಸುತ್ತಿದ್ದಾರೆ.

ಆ ಚಿತ್ರಕ್ಕೆ ‘ಮಿಲಿ’ ಎಂದು ಹೆಸರು ಇಡಲಾಗಿದೆ. ಅಪ್ಪನ ಜತೆ ಕೆಲಸ ಮಾಡಲು ಅವಕಾಶ ಸಿಕ್ಕಿರುವುದಕ್ಕೆ ಅವರು ಖುಷಿ ವ್ಯಕ್ತಪಡಿಸಿದ್ದಾರೆ. ‘ದಢಕ್’ ಚಿತ್ರದ ಮೂಲಕ ಜಾನ್ವಿ ಕಪೂರ್ ಬಣ್ಣದ ಲೋಕಕ್ಕೆ ಕಾಲಿಟ್ಟರು.

ಜಾನ್ವಿ ಕಪೂರ್
Published On - 7:50 pm, Fri, 18 March 22