AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರದ ನಡುವೆಯೂ ಊಟಿಯ ಅನುಭವ ನೀಡುತ್ತಿದೆ ಚಿತ್ರದುರ್ಗದ ಜೋಗಿಮಟ್ಟಿ! ಪ್ರಕೃತಿ ಸೌಂದರ್ಯ ಸವಿಯಲು ಹರಿದು ಬರುತ್ತಿರುವ ಪ್ರವಾಸಿಗರು

ಚಿತ್ರದುರ್ಗ, ಜುಲೈ 20: ಒಂದು ಕಡೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ಎದುರಾಗಿದ್ದು, ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿಗೂ ಜನ ಪರದಾಡುತ್ತಿದ್ದಾರೆ. ಆದರೆ ಇದೇ ಜಿಲ್ಲೆಯ ಜೋಗಿಮಟ್ಟಿ ವನ್ಯಧಾಮ ಮಾತ್ರ ಸಂಪೂರ್ಣ ಭಿನ್ನ ಚಿತ್ರಣವನ್ನು ಕಟ್ಟಿಕೊಟ್ಟಿದೆ. ಮಂಜಿನ ಹೊದಿಕೆ, ತಂಪಾದ ಗಾಳಿ ಮತ್ತು ಹಸಿರು ಪರಿಸರದಿಂದ ಜೋಗಿಮಟ್ಟಿ ಇದೀಗ ಬಯಲುಸೀಮೆಯ ‘ಊಟಿ’ಯಾಗಿ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ.

ಬಸವರಾಜ ಮುದನೂರ್
| Edited By: |

Updated on: Jul 20, 2026 | 9:53 AM

Share
ಚಿತ್ರದುರ್ಗ ಜಿಲ್ಲೆಯಲ್ಲಿ ಬರಗಾಲ ತೀವ್ರವಾಗಿದ್ದರೂ, ಜೋಗಿಮಟ್ಟಿ ವನ್ಯಧಾಮದಲ್ಲಿ ಮಂಜು, ತಂಪಾದ ಗಾಳಿ ಮತ್ತು ಹಸಿರು ಪರಿಸರ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಬಯಲುಸೀಮೆಯ ‘ಊಟಿ’ ಎಂದೇ ಖ್ಯಾತಿ ಪಡೆದಿರುವ ಈ ತಾಣಕ್ಕೆ ನಿತ್ಯ ಸಾವಿರಾರು ಮಂದಿ ಭೇಟಿ ನೀಡುತ್ತಿದ್ದಾರೆ.

1 / 5
ಸಮುದ್ರಮಟ್ಟದಿಂದ ಸುಮಾರು 3,803 ಅಡಿ ಎತ್ತರದಲ್ಲಿರುವ ಜೋಗಿಮಟ್ಟಿ, ಏಷ್ಯಾದಲ್ಲೇ ಅತಿ ಹೆಚ್ಚು ಗಾಳಿ ಬೀಸುವ ಪ್ರದೇಶಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಸುಮಾರು 10 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಕುರುಚಲು ಅರಣ್ಯ, ಅಪರೂಪದ ಜೀವ ವೈವಿಧ್ಯ ಮತ್ತು ತಂಪಾದ ವಾತಾವರಣ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ. ಜಿಲ್ಲೆಯಾದ್ಯಂತ ಮಳೆ ಕೊರತೆ ಕಾಡುತ್ತಿದ್ದರೂ, ಜೋಗಿಮಟ್ಟಿಯಲ್ಲಿ ಮಂಜು ಆವರಿಸಿದ ವಾತಾವರಣ ಪ್ರಕೃತಿ ಪ್ರಿಯರಿಗೆ ವಿಶೇಷ ಅನುಭವ ನೀಡುತ್ತಿದೆ.

2 / 5
ಸ್ಥಳೀಯರ ಪ್ರಕಾರ, ಜೋಗಿಮಟ್ಟಿಯ ಪ್ರಕೃತಿ ಸೌಂದರ್ಯವನ್ನು ಸವಿಯಲು ಪ್ರತಿದಿನ ಜಿಲ್ಲೆಯ ವಿವಿಧ ಭಾಗಗಳಷ್ಟೇ ಅಲ್ಲದೆ, ಹೊರ ಜಿಲ್ಲೆಗಳಿಂದಲೂ ಜನರು ಆಗಮಿಸುತ್ತಿದ್ದಾರೆ. ಪ್ರವಾಸಿಗರು ಸೆಲ್ಫಿ ಕ್ಲಿಕ್ಕಿಸಿಕೊಂಡು, ತಂಪಾದ ಗಾಳಿಯನ್ನು ಆಸ್ವಾದಿಸಿ ಪ್ರಕೃತಿಯ ಮಡಿಲಿನಲ್ಲಿ ಸಮಯ ಕಳೆಯುತ್ತಿದ್ದಾರೆ.

3 / 5
ಬಯಲುಸೀಮೆಯ ಇತರೆ ಭಾಗಗಳಲ್ಲಿ ಬೇಸಿಗೆಯ ವಾತಾವರಣ ಮುಂದುವರಿದಿದ್ದರೂ, ಜೋಗಿಮಟ್ಟಿಯಲ್ಲಿ ಮಾತ್ರ ಮಲೆನಾಡಿನ ಅನುಭವ ಸಿಗುತ್ತಿರುವುದು ವಿಶೇಷವಾಗಿದೆ. ನಗರ ಜೀವನದ ಒತ್ತಡದಿಂದ ಹೊರಬಂದು ಪ್ರಕೃತಿಯ ನಡುವೆ ಕೆಲ ಹೊತ್ತು ಕಳೆಯಲು ಬಯಸುವವರಿಗೆ ಇದು ಉತ್ತಮ ತಾಣವಾಗಿದೆ ಎಂದು ಪ್ರವಾಸಿಗರು ಅಭಿಪ್ರಾಯಪಟ್ಟಿದ್ದಾರೆ.

4 / 5
ಜೋಗಿಮಟ್ಟಿ ಎಲ್ಲಿದೆ?: ಚಿತ್ರದುರ್ಗ ನಗರದಿಂದ ಕೇವಲ 10 ರಿಂದ 12 ಕಿಲೋಮೀಟರ್ ದೂರದಲ್ಲಿರುವ ಜೋಗಿಮಟ್ಟಿ ವನ್ಯಧಾಮಕ್ಕೆ ಪ್ರತಿದಿನ ಸಾವಿರಾರು ಮಂದಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ವಾಹನ ದಟ್ಟಣೆಯೂ ಹೆಚ್ಚುತ್ತಿದೆ. ಬರಗಾಲದ ನಡುವೆಯೂ ತನ್ನ ವಿಶಿಷ್ಟ ಪ್ರಕೃತಿ ಸೌಂದರ್ಯದಿಂದ ಜೋಗಿಮಟ್ಟಿ ಇದೀಗ ಪ್ರವಾಸಿಗರ ನೆಚ್ಚಿನ ತಾಣವಾಗಿ ಹೊರಹೊಮ್ಮಿದೆ.

5 / 5
ಬಸವರಾಜ ಮುದನೂರ್
ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?

ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ

‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್

ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ

ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ

ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?

ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ

‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?

ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!

ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು