
ನಟಿ ಪೂರ್ಣಾ ಅಲಿಯಾಸ್ ಶಮ್ನಾ ಕಾಸಿಮ್ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಅದ್ದೂರಿಯಾಗಿ ಮದುವೆ ನಡೆದಿದೆ.

‘ಜೋಶ್’ ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟವರು ಪೂರ್ಣಾ. ಆ ಚಿತ್ರದಲ್ಲಿ ಅವರು ಮೀನಾ ಎಂಬ ಪಾತ್ರ ಮಾಡಿ ಫೇಮಸ್ ಆಗಿದ್ದರು.

ದುಬೈನಲ್ಲಿ ಪೂರ್ಣಾ ಅವರ ವಿವಾಹ ಸಮಾರಂಭ ಅದ್ದೂರಿಯಾಗಿ ನೆರವೇರಿದೆ. ಕೇವಲ ಕುಟುಂಬದವರು ಮತ್ತು ಆಪ್ತರಿಗೆ ಮಾತ್ರ ಆಮಂತ್ರಣ ನೀಡಲಾಗಿತ್ತು. ಮದುವೆಯ ಫೋಟೋಗಳು ವೈರಲ್ ಆಗಿವೆ.

ಉದ್ಯಮಿ ಶಾನಿದ್ ಆಸಿಫ್ ಅಲಿ ಜೊತೆ ಪೂರ್ಣಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪತಿ ಜೊತೆ ಇರುವ ಅನೇಕ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪೂರ್ಣಾ ಅವರು ಚಿತ್ರರಂಗಕ್ಕೆ ಕಾಲಿಟ್ಟು ಹಲವು ವರ್ಷಗಳೇ ಕಳೆದಿವೆ. ಈಗಲೂ ಅವರ ಕೈಯಲ್ಲಿ ಅನೇಕ ಸಿನಿಮಾಗಳಿವೆ. ಬಹುಭಾಷೆಯಲ್ಲಿ ಅವರು ಫೇಮಸ್ ಆಗಿದ್ದಾರೆ.
Published On - 8:42 am, Tue, 25 October 22