Updated on: Apr 09, 2022 | 7:22 PM
ಮೇಘಾ ಶೆಟ್ಟಿ ಅವರು ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಅವರಿಗೆ ಕಿರುತೆರೆಯಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರ ಅಭಿಮಾನಿ ಬಳಗ ದೊಡ್ಡದಿದೆ. ಈ ಮಧ್ಯೆ ಹಿರಿತೆರೆಯಿಂದಲೂ ಅವರಿಗೆ ಆಫರ್ಗಳು ಬರುತ್ತಿವೆ. ಈ ನಡುವೆ ಮೇಘಾ ಶೆಟ್ಟಿ ಸುದ್ದಿಯಲ್ಲಿದ್ದಾರೆ.
ಮೇಘಾ ಶೆಟ್ಟಿ ಇನ್ಸ್ಟಾಗ್ರಾಮ್ನಲ್ಲಿ ಮೂರು ಫೋಟೋ ಪೋಸ್ಟ್ ಮಾಡಿದ್ದಾರೆ. ಈ ಫೋಟೋದಲ್ಲಿ ಅವರು ಪೋಸ್ ನೀಡಿದ್ದು ಟಾಲಿವುಡ್ನ ಸ್ಟಾರ್ ನಟ ಮಹೇಶ್ ಬಾಬು ಜತೆಗೆ.
ಮೇಘಾ ಶೆಟ್ಟಿ ಅವರು ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ್ದು ಏಕೆ? ಜಾಹೀರಾತಿನ ಶೂಟ್ಗೆ ಇಬ್ಬರೂ ಒಂದಾಗುತ್ತಿದ್ದಾರಾ? ಎಂಬಿತ್ಯಾದಿ ಪ್ರಶ್ನೆಗಳು ಅವರ ಅಭಿಮಾನಿಗಳ ಮನದಲ್ಲಿ ಮೂಡಿದೆ. ಆದರೆ, ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ ಬಗ್ಗೆ ಮೇಘಾ ಶೆಟ್ಟಿ ಗುಟ್ಟು ಕಾಯ್ದುಕೊಂಡಿದ್ದಾರೆ.
ಈ ಪೋಸ್ಟ್ಗೆ ಹಾರ್ಟ್ ಮಾರ್ಕ್ನ ಎಮೋಜಿ ಬಳಕೆ ಮಾಡಿದ್ದಾರೆ. ಅಭಿಮಾನಿಗಳು ಈ ಫೋಟೋಗೆ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಜೀ ಕನ್ನಡದಲ್ಲಿ ಪ್ರಸಾರ ಆಗುವ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಅನು ಸಿರಿಮನೆ ಹೆಸರಿನ ಪಾತ್ರದಲ್ಲಿ ಮೇಘಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ತಮ್ಮ ಪ್ರೊಡಕ್ಷನ್ನಿಂದ ಹೊಸ ಧಾರಾವಾಹಿ ಹೊರತರುತ್ತಿರುವ ಬಗ್ಗೆ ಘೋಷಣೆ ಮಾಡಿದ್ದರು.