
ನಟನೆ ಮತ್ತು ಗ್ಲಾಮರ್ ಮೂಲಕ ಗಮನ ಸೆಳೆಯುವ ನಟಿ ಕಿಯಾರಾ ಅಡ್ವಾಣಿ ಅವರಿಗೆ ಈಗ ಭರ್ಜರಿ ಡಿಮ್ಯಾಂಡ್ ಸೃಷ್ಟಿ ಆಗಿದೆ. ಅವರ ಅಭಿಮಾನಿ ಬಳಗ ಕೂಡ ದಿನದಿಂದ ದಿನಕ್ಕೆ ಹಿರಿದಾಗುತ್ತಿದೆ. ಅವರೀಗ ಹ್ಯಾಟ್ರಿಕ್ ಗೆಲುವು ಪಡೆದಿದ್ದಾರೆ.

ಕಳೆದ ವರ್ಷ ಕಿಯಾರಾ ಅಡ್ವಾಣಿ ನಟಿಸಿದ್ದ ‘ಶೇರ್ಷಾ’ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಆ ಚಿತ್ರದಲ್ಲಿ ಅವರು ಸಿದ್ದಾರ್ಥ್ ಮಲ್ಹೋತ್ರಾಗೆ ಜೋಡಿ ಆಗಿದ್ದರು. ರಿಯಲ್ ಲೈಫ್ ಘಟನೆ ಆಧರಿಸಿ ಆ ಚಿತ್ರ ಮೂಡಿಬಂದಿತ್ತು.

2022ರಲ್ಲಿ ಕೂಡ ಕಿಯಾರಾ ಅಡ್ವಾಣಿ ಅವರ ಗೆಲುವಿನ ಓಟ ಮುಂದುವರಿದಿದೆ. ಕಾರ್ತಿಕ್ ಆರ್ಯನ್ ಜೊತೆ ಅವರು ನಟಿಸಿದ ‘ಭೂಲ್ ಭುಲಯ್ಯ 2’ ಸಿನಿಮಾ ವಿಶ್ವಾದ್ಯಂತ 200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಸೈ ಎನಿಸಿಕೊಂಡಿದೆ. ಈ ಚಿತ್ರದಲ್ಲಿ ಕಿಯಾರಾ ಪಾತ್ರ ಗಮನ ಸೆಳೆದಿದೆ.

ಜೂನ್ 24ರಂದು ತೆರೆಕಂಡ ‘ಜುಗ್ಜುಗ್ ಜಿಯೋ’ ಚಿತ್ರ ಕೂಡ ಬಾಕ್ಸ್ ಆಫೀಸ್ನಲ್ಲಿ ಯಶಸ್ಸು ಕಂಡಿದೆ. ಇದರಲ್ಲಿ ಕಿಯಾರಾ ಅಡ್ವಾಣಿ ಅವರು ವರುಣ್ ಧವನ್ಗೆ ಜೋಡಿಯಾಗಿದ್ದಾರೆ. ಈ ಚಿತ್ರಕ್ಕೆ ಉತ್ತಮ ವಿಮರ್ಶೆ ಸಿಕ್ಕಿದೆ.

ಹಲವು ಆಫರ್ಗಳನ್ನು ಕೈಯಲ್ಲಿ ಇಟ್ಟುಕೊಂಡು ಕಿಯಾರಾ ಅಡ್ವಾಣಿ ಅವರು ಸಾಗುತ್ತಿದ್ದಾರೆ. ಬಾಲಿವುಡ್ ಮಾತ್ರವಲ್ಲದೇ ದಕ್ಷಿಣ ಭಾರತದಲ್ಲೂ ಅವರಿಗೆ ತುಂಬಾ ಬೇಡಿಕೆ ಇದೆ. ರಾಮ್ ಚರಣ್ ನಟನೆಯ ಮುಂದಿನ ಚಿತ್ರಕ್ಕೆ ಅವರು ನಾಯಕಿ ಆಗಿದ್ದಾರೆ.