
ತುಮಕೂರು: ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು.

ಸಂಪ್‌ಗೆ ನೀರು ತುಂಬಿಸಲು ಮೋಟರ್ ಆನ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಅವರು ಸಾವಿಗೀಡಾಗಿದ್ದಾರೆ.

ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮಿನಾರಾಯಣ್ ಕೆಲಸ ಮಾಡುತ್ತಿದ್ದರು.

ತುಮಕೂರು ಜಿಲ್ಲೆ, ಕುಣಿಗಲ್ ತಾಲೂಕಿನ ಹೇರೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರವಿಚಂದ್ರನ್ ಅವರನ್ನು ಹೋಲುತ್ತಿದ್ದ ಲಕ್ಷ್ಮೀನಾರಾಯಣ್ ಜೂನಿಯರ್ ರವಿಚಂದ್ರನ್ ಎಂದೇ ಖ್ಯಾತರಾಗಿದ್ದರು.

ಉಪೇಂದ್ರ ಅವರೊಂದಿಗೆ ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್
Published On - 9:27 pm, Tue, 10 May 22