
ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲು ನಾನಾ ಕಡೆಗಳಿಂದ ಭಕ್ತರು ಆಗಮಿಸುತ್ತಾರೆ. ಕೇವಲ ಸಾಮಾನ್ಯರು ಮಾತ್ರವಲ್ಲದೆ, ಸೆಲೆಬ್ರಿಟಿಗಳು ಕೂಡ ಇಲ್ಲಿಗೆ ಆಗಮಿಸಿ ದರ್ಶನ ಪಡೆಯುತ್ತಾರೆ. ಕಾಲಿವುಡ್ ದಂಪತಿ ಸೂರ್ಯ ಹಾಗೂ ಜ್ಯೋತಿಕಾ ಇಲ್ಲಿಗೆ ಆಗಮಿಸಿದ್ದಾರೆ.

ಕಾಲಿವುಡ್ನಲ್ಲಿ ಸಾಕಷ್ಟು ಹೆಸರು ಮಾಡಿರೋ ಸೂರ್ಯ ಹಾಗೂ ಜ್ಯೋತಿಕಾ ಅವರು ಕೊಲ್ಲೂರಿಗೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಚಂಡಿಕಾಯಾಗದಲ್ಲಿ ಭಾಗಿಯಾಗಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಕೊಲ್ಲೂರು ದೇಗುಲ ಇದೆ. ಅಲ್ಲಿಗೆ ನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈಗ ಕಾಲಿವುಡ್ ದಂಪತಿ ಕೂಡ ಇಲ್ಲಿಗೆ ಆಗಮಿಸಿದ್ದು ವಿಶೇಷವಾಗಿತ್ತು.

ಸೆಲೆಬ್ರಿಟಿ ದಂಪತಿಯನ್ನು ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದಾರೆ. ಸೂರ್ಯ ಹಾಗೂ ಜ್ಯೋತಿಕಾಗೆ ಕರ್ನಾಟಕದಲ್ಲೂ ದೊಡ್ಡ ಅಭಿಮಾನಿ ಬಳಗ ಇದೆ.

ಸೂರ್ಯ ಅವರು ಇತ್ತೀಚೆಗೆ ದೊಡ್ಡ ಸೋಲು ಕಂಡಿದ್ದಾರೆ. ಬಿಗ್ ಬಜೆಟ್ ಸಿನಿಮಾ ‘ಕಂಗುವ’ ಹೀನಾಯ ಸೋಲು ಕಂಡಿದೆ. ಇದು ಅವರಿಗೆ ಸಾಕಷ್ಟು ಬೇಸರವನ್ನು ಉಂಟು ಮಾಡಿದೆ.