ಪ್ರಭಾಸ್ ಸೇರಿದಂತೆ ಹಲವು ಸ್ಟಾರ್ ನಟರು ನಟಿಸಿರುವ ‘ಕಲ್ಕಿ 2898 ಎಡಿ’ ಸಿನಿಮಾದ ಅದ್ಧೂರಿ ಪ್ರೀ ರಿಲೀಸ್ ಇವೆಂಟ್ ನಿನ್ನೆ ನಡೆದಿದೆ.
ಈ ಅದ್ಧೂರಿ ಇವೆಂಟ್ನಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ಅಮಿತಾಬ್ ಬಚ್ಚನ್ ಇನ್ನೂ ಹಲವು ಭಾಗಿಯಾಗಿದ್ದರು.
ಇವೆಂಟ್ನಲ್ಲಿ ಪ್ರಭಾಸ್ ಹಾಗೂ ದೀಪಿಕಾರ ಆತ್ಮೀಯ ಗೆಳೆತನ ಎಲ್ಲರ ಗಮನ ಸೆಳೆಯಿತು. ಪರಸ್ಪರ ತಮಾಷೆ ಮಾಡುತ್ತಾ ಪರಸ್ಪರರ ಕಾಲೆಳೆದುಕೊಂಡರು.
ಲೆಜೆಂಡರಿ ನಟ ಅಮಿತಾಬ್ ಬಚ್ಚನ್ ಸಹ ಪ್ರಭಾಸ್, ದೀಪಿಕಾ ಹಾಗೂ ಇನ್ನಿತರರ ಬಗ್ಗೆ ಹೆಮ್ಮೆಯಿಂದ ಮಾತನಾಡಿದರು.
‘ಕಲ್ಕಿ 2898 ಎಡಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಚಿತ್ರತಂಡ ಜೋರಾಗಿ ಮಾಡುತ್ತಿದೆ.
‘ಕಲ್ಕಿ 2898 ಎಡಿ’ ಸಿನಿಮಾ ಜೂನ್ 27 ರಂದು ವಿಶ್ವದಾದ್ಯಂತ ಏಕಕಾಲಕ್ಕೆ ತೆರೆಗೆ ಬರಲಿದ್ದು, ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದೆ.