ಕಮಲ್ ಹಾಸನ್ ನಟನೆಯ ‘ವಿಕ್ರಮ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಮುಗಿದಿದ್ದು, 13 ಕಡೆಗಳಲ್ಲಿ ಕತ್ತರಿ ಹಾಕಲಾಗಿದೆ. ಸೆನ್ಸಾರ್ ಮಂಡಳಿ ಸದಸ್ಯರು ಸೂಚಿಸಿದ ಕಡೆಗಳಲ್ಲಿ ಕತ್ತರಿ ಪ್ರಯೋಗ ಮಾಡಲಾಗಿದೆ. ನಂತರ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ಸಿಕ್ಕಿದೆ.
ಟ್ರೇಲರ್ನಲ್ಲಿ ಗೊತ್ತಾಗಿರುವಂತೆ ‘ವಿಕ್ರಮ್’ ಸಿನಿಮಾ ಸಖತ್ ಮಾಸ್ ಆಗಿ ಮೂಡಿಬಂದಿದೆ. ಸಿಕ್ಕಾಪಟ್ಟೆ ಸಾಹಸ ದೃಶ್ಯಗಳು ಕೂಡ ಇವೆ. ಸಿನಿಮಾದ ಕೆಲವು ಸಂಭಾಷಣೆಗಳಲ್ಲಿ ಬೈಗುಳಗಳು ಕೂಡ ಇದ್ದವು. ಅತಿಯಾದ ಹಿಂಸೆಯನ್ನು ತೋರಿಸುವ ಸೀನ್ಗಳು ಸಹ ಚಿತ್ರದಲ್ಲಿವೆ. ಅವುಗಳಿಗೆ ಕತ್ತರಿ ಹಾಕುವಂತೆ ಸೂಚಿಸಲಾಗಿದೆ.
‘ವಿಕ್ರಮ್’ ಚಿತ್ರಕ್ಕೆ ಲೋಕೇಶ್ ಕನಗರಾಜ್ ನಿರ್ದೇಶನ ಮಾಡಿದ್ದಾರೆ. ಜೂನ್ 3ರಂದು ಅದ್ದೂರಿಯಾಗಿ ಈ ಚಿತ್ರ ಬಿಡುಗಡೆ ಆಗಲಿದೆ. ಈಗಾಗಲೇ ಮುಂಗಡ ಟಿಕೆಟ್ ಬುಕಿಂಗ್ ಓಪನ್ ಆಗಿದ್ದು, ಅನೇಕ ಕಡೆಗಳಲ್ಲಿ ಟಿಕೆಟ್ಗಳು ಸೋಲ್ಡ್ ಔಟ್ ಆಗುತ್ತಿವೆ.
ತಾರಾಗಣದ ಕಾರಣದಿಂದ ‘ವಿಕ್ರಮ್’ ಸಿನಿಮಾ ಹೆಚ್ಚು ನಿರೀಕ್ಷೆ ಮೂಡಿಸಿದೆ. ಕಮಲ್ ಹಾಸನ್ ಜೊತೆಗೆ ವಿಜಯ್ ಸೇತುಪತಿ ಮತ್ತು ಫಹಾದ್ ಫಾಸಿಲ್ ನಟಿಸಿದ್ದಾರೆ. ಈ ಮೂವರ ಕಾಂಬಿನೇಷನ್ ಇರುವ ಕಾರಣದಿಂದ ಈ ಚಿತ್ರಕ್ಕೆ ಮೊದಲ ದಿನ ಭರ್ಜರಿ ಓಪನಿಂಗ್ ಸಿಗುವ ಸಾಧ್ಯತೆ ದಟ್ಟವಾಗಿದೆ.
ಕಮಲ್ ಹಾಸನ್ ಅವರ ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್’ ಬ್ಯಾನರ್ ಮೂಲಕ ‘ವಿಕ್ರಮ್’ ಸಿನಿಮಾ ನಿರ್ಮಾಣ ಆಗಿದೆ. ಅದ್ದೂರಿ ಬಜೆಟ್ನಲ್ಲಿ ಈ ಚಿತ್ರ ಮೂಡಿಬಂದಿದೆ. ಟ್ರೇಲರ್ ನೋಡಿದ ಫ್ಯಾನ್ಸ್ ಬೆರಗಾಗಿದ್ದಾರೆ. ಚಿತ್ರಮಂದಿರದಲ್ಲಿ ಸಿನಿಮಾ ಕಣ್ತುಂಬಿಕೊಳ್ಳಲು ಸಿನಿಪ್ರಿಯರು ಕಾದಿದ್ದಾರೆ.