- Kannada News Photo gallery Kangana Ranaut starrer Emergency movie release date postponed due to this reason Entertainment News in Kannada
‘ಎಮರ್ಜೆನ್ಸಿ’ ಬಿಡುಗಡೆ ಮತ್ತೆ ಮುಂದಕ್ಕೆ; ಕಂಗನಾ ಸಿನಿಮಾಗೆ ಹಲವು ಅಡೆತಡೆ
ಕಂಗನಾ ರಣಾವತ್ ಅವರು ‘ಎಮರ್ಜೆನ್ಸಿ’ ಚಿತ್ರದ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಿಡುಗಡೆಗೂ ಮುನ್ನವೇ ಈ ಸಿನಿಮಾ ವಿವಾದಕ್ಕೆ ಕಾರಣ ಆಗಿದೆ. ಸೆ.6ಕ್ಕೆ ಈ ಚಿತ್ರ ರಿಲೀಸ್ ಆಗುವುದು ಅನುಮಾನ ಎನ್ನಲಾಗಿದೆ. ಸೆನ್ಸಾರ್ ಪ್ರಮಾಣ ಪತ್ರ ಸಿಗುವುದು ತಡವಾಗಿದೆ. ಅಲ್ಲದೇ ಸಿಖ್ ಸಮುದಾಯದಿಂದಲೂ ‘ಎಮರ್ಜೆನ್ಸಿ’ ಸಿನಿಮಾದ ಬಿಡುಗಡೆಗೆ ವಿರೋಧ ವ್ಯಕ್ತವಾಗುತ್ತಿದೆ.
Updated on: Sep 01, 2024 | 9:34 PM

ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾ ಅಂತಿಮವಾಗಿ ಸೆಪ್ಟೆಂಬರ್ 6ರಂದು ತೆರೆಕಾಣಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಈಗ ಒಂದು ಬ್ಯಾಡ್ ನ್ಯೂಸ್ ಕೇಳಿಬಂದಿದೆ. ‘ಎಮರ್ಜೆನ್ಸಿ’ ಸಿನಿಮಾದ ರಿಲೀಸ್ ದಿನಾಂಕ ಮತ್ತೆ ಮುಂದಕ್ಕೆ ಹೋಗಿದೆ ಎಂಬ ಮಾಹಿತಿ ಸಿಕ್ಕಿದೆ. ಈ ಚಿತ್ರಕ್ಕೆ ಅನೇಕ ಅಡೆತಡೆಗಳು ಎದುರಾಗುತ್ತಿವೆ.

ಈಗಾಗಲೇ ತಿಳಿದಿರುವಂತೆ ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಇಂದಿರಾ ಗಾಂಧಿ ಕುರಿತಾದ ಕಥೆ ಇದೆ. ತುರ್ತು ಪರಿಸ್ಥಿತಿಯ ದಿನಗಳನ್ನು ಆಧರಿಸಿ ಈ ಸಿನಿಮಾ ಮಾಡಲಾಗಿದೆ. ಇದು ವಿವಾದಾತ್ಮಕ ವಿಷಯ ಆದ್ದರಿಂದ ಚಿತ್ರಕ್ಕೆ ಸೆನ್ಸಾರ್ ಪ್ರಮಾಣ ಪತ್ರ ನೀಡುವುದು ಕಷ್ಟ ಆಗುತ್ತಿದೆ. ಸಿನಿಮಾ ರಿಲೀಸ್ ಬಳಿಕ ಎದುರಾಗಬಹುದಾದ ಸಮಸ್ಯೆಗಳನ್ನು ತಪ್ಪಿಸಲು ಸೆನ್ಸಾರ್ ಮಂಡಳಿ ಈಗಲೇ ಎಚ್ಚರಿಕೆ ವಹಿಸುತ್ತಿದೆ.

ಸೆನ್ಸಾರ್ ಮಂಡಳಿಯವರು ‘ಎಮರ್ಜೆನ್ಸಿ’ ಚಿತ್ರತಂಡಕ್ಕೆ ಒಂದಷ್ಟು ಸೂಚನೆಗಳನ್ನು ನೀಡಿದ್ದಾರೆ. ಕೆಲವು ಆಕ್ಷೇಪಾರ್ಹ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೂಚಿಸಲಾಗಿದೆ. ಅಲ್ಲದೇ, ಸಿನಿಮಾಗೆ ಯಾವ ಪ್ರಮಾಣ ಪತ್ರ ನೀಡಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಕೆಲವು ಸ್ಪಷ್ಟನೆಗಳು ಬೇಕಿರುವುದರಿಂದ ಚಿತ್ರತಂಡಕ್ಕೆ ನೋಟಿಸ್ ನೀಡುವುದು ಬಾಕಿ ಇದೆ.

ಆ ನೋಟಿಸ್ಗೆ ಚಿತ್ರತಂಡದವರು ಉತ್ತರ ನೀಡಬೇಕಿದೆ. ಅಷ್ಟರ ನಂತರ ಸೆನ್ಸಾರ್ ಮಂಡಳಿಯಿಂದ ಬದಲಾವಣೆ ಸೂಚಿಸಿದರೆ ಸೆಪ್ಟೆಂಬರ್ 6ರೊಳಗೆ ಕೆಲಸ ಪೂರ್ಣಗೊಳ್ಳುವುದು ಕಷ್ಟ ಆಗಲಿದೆ. ಈ ಕಾರಣದಿಂದ ಸಿನಿಮಾದ ಬಿಡುಗಡೆಯನ್ನು ಮುಂದೂಡುವುದು ಅನಿವಾರ್ಯ ಎನ್ನಲಾಗಿದೆ. ‘ಎಮರ್ಜೆನ್ಸಿ’ ಸಿನಿಮಾಗೆ ಸಿಖ್ ಸಮುದಾಯದವರಿಂದಲೂ ಆಕ್ಷೇಪ ವ್ಯಕ್ತವಾಗಿದೆ.

ಇಂದಿರಾ ಗಾಂಧಿ ಹತ್ಯೆ ಮತ್ತು ಪಂಜಾಬ್ ಗಲಭೆ ಬಗ್ಗೆ ಸಿನಿಮಾದಲ್ಲಿ ತೋರಿಸಬಾರದು ಎಂಬ ಒತ್ತಾಯ ಕೇಳಿಬಂದಿದೆ ಎಂದು ಸ್ವತಃ ಕಂಗನಾ ಟ್ವೀಟ್ ಮಾಡಿದ್ದಾರೆ. ಟ್ರೇಲರ್ ಬಿಡುಗಡೆ ಆದ ಬಳಿಕ ಈ ಚಿತ್ರಕ್ಕೆ ಸಿಖ್ ಸಮುದಾಯದವರ ವಿರೋಧ ಹೆಚ್ಚಾಯಿತು. ಈ ಬಗ್ಗೆ ಕೋರ್ಟ್ನಲ್ಲೂ ವಿಚಾರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಿನಿಮಾದ ರಿಲೀಸ್ ಇನ್ನಷ್ಟು ತಡವಾಗಲಿದೆ. ಸಿನಿಮಾದ ಹೊಸ ರಿಲೀಸ್ ದಿನಾಂಕ ತಿಳಿಯಲು ಫ್ಯಾನ್ಸ್ ಕಾಯುತ್ತಿದ್ದಾರೆ.




