
ನಟಿ ಕಂಗನಾ ರಣಾವತ್ ಅವರು ದೈವ ಭಕ್ತೆ. ಈಗ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಅವರು ತಿರುಮಲಕ್ಕೆ ಬಂದಿರುವ ಫೋಟೋಗಳು ವೈರಲ್ ಆಗಿವೆ. ಬಾಲಿವುಡ್ ನಟಿಯ ಆಗಮನದ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತಮುತ್ತ ಭದ್ರತೆ ಹೆಚ್ಚಿಸಲಾಗಿತ್ತು.

ತಿರುಪತಿ ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಿದ ಕಂಗನಾ ಅವರು ಆಶೀರ್ವಾದ ಪಡೆದುಕೊಂಡಿದ್ದಾರೆ. ಸಹೋದರಿ ರಂಗೋಲಿ ಚಂಡೇಲ್ ಸೇರಿದಂತೆ ಕುಟುಂಬದ ಇತರೆ ಸದಸ್ಯರು ಹಾಗೂ ಆಪ್ತರ ಜೊತೆ ಬಂದು ಅವರು ದೇವರಿಗೆ ನಮಿಸಿದ್ದಾರೆ. ಅವರ ಫೋಟೋಗಳು ಮತ್ತು ವಿಡಿಯೋಗಳು ವೈರಲ್ ಆಗಿವೆ.

ಕಂಗನಾ ರಣಾವತ್ ಅವರು ಬಾಲಿವುಡ್ನಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸಿರುವ ‘ಧಾಕಡ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮೇ 20ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಸಿನಿಮಾದ ಬಿಡುಗಡೆಯ ಹೊಸ್ತಿಲಿನಲ್ಲಿ ಅವರು ದೇವರ ದರ್ಶನ ಪಡೆದುಕೊಂಡಿದ್ದಾರೆ.

‘ಧಾಕಡ್’ ಸಿನಿಮಾ ಮೇಲೆ ಕಂಗನಾ ರಣಾವತ್ ಅವರು ಹೆಚ್ಚು ಭರವಸೆ ಇಟ್ಟುಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರು ಭರ್ಜರಿ ಆ್ಯಕ್ಷನ್ ದೃಶ್ಯಗಳಲ್ಲಿ ನಟಿಸಿದ್ದಾರೆ. ಈಗಾಗಲೇ ಟ್ರೇಲರ್ ಗಮನ ಸೆಳೆದಿದೆ. ಈ ಸಿನಿಮಾ ಗೆಲ್ಲಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ.

ದಕ್ಷಿಣ ಭಾರತದ ಸಿನಿಮಾಗಳ ಎದುರು ಹಿಂದಿ ಚಿತ್ರರಂಗ ಮಂಕಾಗಿದೆ. ಬಾಲಿವುಡ್ನ ಯಾವುದೇ ಸಿನಿಮಾಗಳು ಉತ್ತಮ ಕಲೆಕ್ಷನ್ ಮಾಡುತ್ತಿಲ್ಲ. ಇಂಥ ಸಂದರ್ಭದಲ್ಲಿ ‘ಧಾಕಡ್’ ಸಿನಿಮಾ ಬಗ್ಗೆ ಕಂಗನಾ ರಣಾವತ್ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

‘ಧಾಕಡ್’ ಚಿತ್ರದ ಟ್ರೇಲರ್ ಅನ್ನು ನಟ ಸಲ್ಮಾನ್ ಖಾನ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಇತ್ತೀಚೆಗೆ ಶೇರ್ ಮಾಡಿಕೊಂಡರು. ಅದರಿಂದ ಕಂಗನಾ ರಣಾವತ್ ಅವರಿಗೆ ದೊಡ್ಡ ಬಲ ಬಂದಂತಾಗಿದೆ. ಅದಕ್ಕೆ ಸಲ್ಲುಗೆ ಕಂಗನಾ ಧನ್ಯವಾದ ತಿಳಿಸಿದ್ದಾರೆ.