Jayanthi Photos: ಕಮಲಾಕುಮಾರಿಯಿಂದ ಅಭಿನಯ ಶಾರದೆಯಾಗುವ ತನಕ ಜಯಂತಿ ನಡೆದುಬಂದ ಹಾದಿ

Edited By:

Updated on: Jul 26, 2021 | 10:08 AM

Jayanti Death News: ಕನ್ನಡ ನಿರ್ದೇಶಕ ವೈ.ಆರ್. ಪುಟ್ಟಸ್ವಾಮಿಯವರು ಒಂದು ನೃತ್ಯಾಭ್ಯಾಸದಲ್ಲಿ ಜಯಂತಿಯವರನ್ನು ನೋಡಿ ತಮ್ಮ `ಜೇನು ಗೂಡು' ಚಿತ್ರದಲ್ಲಿ ನಟಿಸುವ ಅವಕಾಶ ಕೊಟ್ಟರು. ಕಮಲಾ ಕುಮಾರಿಗೆ ಜಯಂತಿ ಎಂದು ನಾಮಕರಣ ಮಾಡಿದ್ದು ಪುಟ್ಟಸ್ವಾಮಿಯವರೇ.

1 / 7
ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಇಂದು (ಜುಲೈ 26) ಬೆಳಗ್ಗೆ ಮೃತಪಟ್ಟಿದ್ದಾರೆ.

ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಇಂದು (ಜುಲೈ 26) ಬೆಳಗ್ಗೆ ಮೃತಪಟ್ಟಿದ್ದಾರೆ.

2 / 7

ಬೆಂಗಳೂರಿನ ನಿವಾಸದಲ್ಲಿ ನಟಿ ಜಯಂತಿ ಕೊನೆಯುಸಿರೆಳೆದಿದ್ದಾರೆ ಎಂದು ನಟಿ ಜಯಂತಿ ಪುತ್ರ ಕೃಷ್ಣ ಕುಮಾರ್ ಮಾಹಿತಿ ನೀಡಿದ್ದಾರೆ.

3 / 7

ಜನವರಿ 6, 1945ರಲ್ಲಿ ಕರ್ನಾಟಕದ ಬಳ್ಳಾರಿಯಲ್ಲಿ ಜನಿಸಿದ ಜಯಂತಿಯ ಮೂಲ ಹೆಸರು ಕಮಲಾ ಕುಮಾರಿ. ತಂದೆ ಬಾಲಸುಬ್ರಹ್ಮಣ್ಯಂ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರೆ, ತಾಯಿ ಸಂತಾನಲಕ್ಷ್ಮೀ ಗೃಹಿಣಿಯಾಗಿದ್ದರು.

4 / 7

ಮನೆಯಲ್ಲಿ ಹಿರಿಯ ಪುತ್ರಿಯಾಗಿ ಜನಿಸಿದ ಜಯಂತಿಗೆ ಇಬ್ಬರು ಕಿರಿಯ ಸಹೋದರರಿದ್ದಾರೆ. ಇವರ ತಂದೆ- ತಾಯಿ ವಿಚ್ಛೇದನ ಪಡೆದ ಕಾರಣ ಜಯಂತಿ ತಮ್ಮ ತಾಯಿಯ ಜೊತೆ ಮದ್ರಾಸ್‌ನಲ್ಲಿ ಬೆಳೆದರು.

5 / 7

ಜಯಂತಿಯ ತಾಯಿಯವರಿಗೆ ಇವರನ್ನು ಶಾಸ್ತ್ರೀಯ ನೃತ್ಯಗಾರ್ತಿಯನ್ನಾಗಿ ಮಾಡಬೇಕೆಂಬ ಬಯಕೆ ಇದ್ದುದ್ದರಿಂದ ಚಂದ್ರಕಲಾರವರ ನೃತ್ಯಶಾಲೆಗೆ ಸೇರಿಸಿದರು. ಇಲ್ಲಿ ಜಯಂತಿಯವರ ಸಹಪಾಠಿಯಾಗಿದ್ದ ಮನೋರಮಾ ಮುಂದೆ ಪ್ರಖ್ಯಾತ ತಮಿಳು ನಟಿಯಾದರು.

6 / 7

ಜಯಂತಿ

7 / 7

ಅಭಿನಯ ಶಾರದೆ ಜಯಂತಿ

Published On - 10:08 am, Mon, 26 July 21

Loading...
Unable to load recommendations.
Follow Us