Sara Aboobacker Obituary: ಚಂದ್ರಗಿರಿ ತೀರದಿಂದ ಹೆಣ್ಣು ಮಕ್ಕಳಿಗೆ ಶಿಕ್ಷಣ ದೊರಕಿಸುವ ಹೋರಾಟದವರೆಗೆ ಸಾರಾ ಅಬೂಬಕ್ಕರ್ ನಡೆದು ಬಂದ ಹಾದಿ ಫೋಟೋಗಳಲ್ಲಿ

Sara Abubakar Achievements: ಸಾರಾ ಅಬೂಬಕ್ಕರ್ ಅವರ ಮೊದಲ ಕಾದಂಬರಿ ‘ಚಂದ್ರಗಿರಿಯ ತೀರದಲ್ಲಿ’ ಲಂಕೇಶ್ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿತು. ಹಾಗೆ ಅವರು ಬರೆದ ಮೊತ್ತೊಂದು ಕಾದಂಬರಿ ವಜ್ರಗಳು ಇತ್ತೀಚಿಗೆ ಸಿನಿಮಾ ಕೂಡ ಆಗಿತ್ತು. 'ಸಾರಾ ವಜ್ರ' ಅನ್ನೊ ಹೆಸರಿನ ಸಿನಿಮಾ.

TV9 Web
| Updated By: ವಿವೇಕ ಬಿರಾದಾರ

Updated on: Jan 10, 2023 | 3:19 PM

Kannada Novelist Sara Aboobacker Obituary and life details of sara abubakar in kannada

ಹಿರಿಯ ಸಾಹಿತಿ, ಕಾಂದಬರಿಗಾರ್ತಿ, ನಾಡೋಜ ಸಾರಾ ಅಬೂಬಕ್ಕರ್ ಅವರು ಜೂನ್​ 30 1936 ರಂದು ಕಾಸರಗೋಡಿನ ಚಂದ್ರಗಿರಿತೀರದ ಕುಗ್ರಾಮವೊಂದರಲ್ಲಿ ಜನಿಸಿದರು.

1 / 11
Kannada Novelist Sara Aboobacker Obituary and life details of sara abubakar in kannada

ತಂದೆ ನ್ಯಾಯವಾದಿಗಳಾಗಿದ್ದ ಪಿ. ಅಹಮದ್ ಅವರು ಮತ್ತು ತಾಯಿ ಚೈನಾಬಿ ಅವರು. ಸಾರಾ ಅವರ ಪ್ರಾಥಮಿಕ ವಿದ್ಯಾಭ್ಯಾಸ ಹುಟ್ಟಿದೂರಿನಲ್ಲಿ ನೆರವೇರಿತು. ಮುಂದೆ ಅವರು ಹೈಸ್ಕೂಲುವರೆಗೆ ಕಲಿತದ್ದು ಕಾಸರಗೋಡಿನಲ್ಲಿ.

2 / 11
Kannada Novelist Sara Aboobacker Obituary and life details of sara abubakar in kannada

ಅರೆಬಿಕ್ ಕಲಿತಿದ್ದ ಅಜ್ಜಿ ಹೇಳುತ್ತಿದ್ದ ಕಥೆಗಳಿಂದ ಆಕರ್ಷಿತರಾಗಿ ಸಾಹಿತ್ಯದಲ್ಲಿ ಏನಾದರೂ ಸಾಧಿಸಬೇಕೆಂಬ ಆಶಯ ಅವರ ಬಾಲ್ಯದಲ್ಲೇ ಮೂಡಿಬಂದಿತ್ತು. ಮುಂದೆ ಇವರು ಎಂಜಿನಿಯರ್ ಆಗಿದ್ದ ಅಬೂಬಕ್ಕರ್‌ ಅವರೊಡನೆ ಸಾರಾ ಅವರ ವಿವಾಹವಾಯಿತು

3 / 11
Kannada Novelist Sara Aboobacker Obituary and life details of sara abubakar in kannada

ಸಾರಾ ಅಬೂಬಕ್ಕರ್ ಅವರು ಶಿವರಾಮಕಾರಂತರು, ಇನಾಂದಾರ್, ಭೈರಪ್ಪ, ಅನಂತಮೂರ್ತಿ ಇವರೆಲ್ಲರ ಬರವಣಿಗೆಗೆ ಮಾರುಹೋಗಿ ಸದಾ ಓದಿನಲ್ಲಿ ಮಗ್ನರಾಗಿರುತ್ತಿದ್ದರು. ಮನೋವಿಜ್ಞಾನದ ಬಗ್ಗೆ ತ್ರಿವೇಣಿಯವರು ಬರೆದ ಕಾದಂಬರಿಗಳು ಸಾರಾ ಅವರಲ್ಲಿ ಆಕರ್ಷಣೆ ಹುಟ್ಟಿಸಿದವು.

4 / 11
Kannada Novelist Sara Aboobacker Obituary and life details of sara abubakar in kannada

ನಲವತ್ತು ದಾಟಿದ ನಂತರ ಸಾರಾ ಅಬೂಬಕ್ಕರ್ ಬರೆಯಲು ಪ್ರಾರಂಭಿಸಿದರು. ಹೀಗೆ ಅವರು ಬರೆದ ಮೊದಲ ಕಾದಂಬರಿ ‘ಚಂದ್ರಗಿರಿಯ ತೀರದಲ್ಲಿ’ ಲಂಕೇಶ್ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿತು.

5 / 11
Kannada Novelist Sara Aboobacker Obituary and life details of sara abubakar in kannada

ಕಾದಂಬರಿಗಳು: ಚಂದ್ರಗಿರಿಯ ತೀರದಲ್ಲಿ- 1948, ಸಹನಾ, - 1985, ವಜ್ರಗಳು, ಕದನವಿರಾಮ, - 1988, ಸುಳಿಯಲ್ಲಿ ಸಿಕ್ಕವರು-1994, ಪ್ರವಾಹ-ಸುಳಿ (ಸುಳಿಯಲ್ಲಿ ಸಿಕ್ಕವರು ಕೃತಿಯ ಭಾಗ-೨), ತಳ ಒಡೆದ ದೋಣಿ- 1997, ಪಂಜರ, ಇಳಿಜಾರು, ಕಾಣಿಕೆ

6 / 11
Kannada Novelist Sara Aboobacker Obituary and life details of sara abubakar in kannada

ಕಥಾಸಂಕಲನಗಳು: ಚಪ್ಪಲಿಗಳು 1989, ಪಯಣ ಮತ್ತು ಇತರ ಕಥೆಗಳು, ಅರ್ಧರಾತ್ರಿಯಲ್ಲಿ ಹುಟ್ಟಿದ ಕೂಸು, 1992, ಖೆಡ್ಡ, ಸುಮಯ್ಯಾ (ಜನಪದ ಆಧರಿಸಿದ ಕಥೆಗಳು), 2004, ಗಗನ ಸಖಿ, 2007, ಬಾನುಲಿ ನಾಟಕಗಳು: ಕಮರಿದ ಕನಸು, ಮಗಳು ಹುಟ್ಟಿದಳು, ತೇಲಾಡುವ ಮೋಡಗಳು, ತಾಳ, ಹೀಗೂ ಒಂದು ಬದುಕು. ಲೇಖನ ಮತ್ತು ಅನುವಾದಗಳು: ಲೇಖನ ಗುಚ್ಛ, ಮನೋಮಿ, ಬಲೆ, ನಾನಿನ್ನು ನಿದ್ರಿಸುವೆ (ಕಾದಂಬರಿಗಳು), ಪ್ರವಾಸಕಥನ: ಐಷಾರಾಮದ ಆಳದಲ್ಲಿ.

7 / 11
Kannada Novelist Sara Aboobacker Obituary and life details of sara abubakar in kannada

10ಕ್ಕೂ ಹೆಚ್ಚು ಕಾದಂಬರಿ, 6 ಕಥಾ ಸಂಕಲನ, 5 ಬಾನುಲಿ ನಾಟಕ, 4 ಲೇಖನ, 1 ಪ್ರವಾಸ ಕಥನ ಬರೆದಿದ್ದಾರೆ. ಸಾರಾ ಅಬೂಬಕರ್ ಅವರ 'ವಜ್ರಗಳು' ಕಾದಂಬರಿ ಇತ್ತೀಚಿಗೆ ಸಿನಿಮಾ ಕೂಡ ಆಗಿತ್ತು. 'ಸಾರಾ ವಜ್ರ' ಅನ್ನೊ ಹೆಸರಿನ ಸಿನಿಮಾ.

8 / 11
Kannada Novelist Sara Aboobacker Obituary and life details of sara abubakar in kannada

ಹೆಣ್ಣು ಮಕ್ಕಳಿಗೆ ಶಿಕ್ಷಣ ದೊರಕಬೇಕೆಂದು ನಿರಂತರವಾಗಿ ಪ್ರತಿಪಾದಿಸುವ ಸಾರಾ ಅಬೂಬಕ್ಕರ್ ಹೆಣ್ಣು ಮಕ್ಕಳು ಪ್ರಾಣಿಗಳು, ಹೆರಲು ಇರುವ ಯಂತ್ರಗಳು ಎಂದು ಬಿಂಬಿಸಿರುವ ಸಮಾಜ ನಮ್ಮದು. ಇಸ್ಲಾಂನ ಮೂಲದಲ್ಲಿ ಹೆಣ್ಣಿಗೆ ಅಪಾರ ಗೌರವವಿವೆ. ಆದರೆ ಸೌದಿ ಅರೇಬಿಯಾ ಮೂಲದ 'ವಹಾಬಿಸಂ’ ವಿರುದ್ಧ ಮಾತನಾಡಿ ಗಮನ ಸೆಳೆದಿದ್ದರು

9 / 11
Kannada Novelist Sara Aboobacker Obituary and life details of sara abubakar in kannada

ಸಾರಾ ಅಬೂಬಕ್ಕರ್ 11ಕ್ಕೂ ಹೆಚ್ಚು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ, ‘ಸಹನಾ’ ಕಾದಂಬರಿಗೆ ವರ್ಧಮಾನ ಪ್ರಶಸ್ತಿ, ‘ಸುಳಿಯಲ್ಲಿ ಸಿಕ್ಕವರು’ ಕೃತಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ ಮತ್ತು ಸಂದೇಶ ಪ್ರಶಸ್ತಿ, ಅನುಪಮ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

10 / 11
Kannada Novelist Sara Aboobacker Obituary and life details of sara abubakar in kannada

ಸಾರಾ ಅಬೂಬಕ್ಕರ್ (86) ಅವರು ಇಂದು (ಜ.8) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಕೊನೆಯುಸಿರೆಳೆದರು. ಮಂಗಳೂರಿನ ಲೇಡಿಹಿಲ್​ನ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ರಾತ್ರಿ 8 ಗಂಟೆಗೆ ಅಂತಿಮ ಸಂಸ್ಕಾರ ನೆರವೇರಲಿದೆ.

11 / 11
Follow us
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು
Video: ಕ್ರಿಸ್​ಮಸ್​ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
Video: ಕ್ರಿಸ್​ಮಸ್​ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ವಾಜಪೇಯಿ ಜನ್ಮದಿನ, ವಿಡಿಯೋ ಮೂಲಕ ಅಟಲ್ ಕಾರ್ಯ ಹೊಗಳಿದ ಪ್ರಧಾನಿ ಮೋದಿ
ವಾಜಪೇಯಿ ಜನ್ಮದಿನ, ವಿಡಿಯೋ ಮೂಲಕ ಅಟಲ್ ಕಾರ್ಯ ಹೊಗಳಿದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಕ್ರಿಸ್ಮಸ್​ ಸಡಗರ​, ಲೈಟಿಂಗ್ಸ್​ನಲ್ಲಿ ಚರ್ಚ್​ಗಳು ಝಗಮಗ
ಬೆಂಗಳೂರಿನಲ್ಲಿ ಕ್ರಿಸ್ಮಸ್​ ಸಡಗರ​, ಲೈಟಿಂಗ್ಸ್​ನಲ್ಲಿ ಚರ್ಚ್​ಗಳು ಝಗಮಗ
ಆಪರೇಷನ್ ಬಳಿಕ ಶಿವರಾಜ್​ಕುಮಾರ್ ಹೆಲ್ತ್​ಅಪ್​ಡೇಟ್ ನೀಡಿದ ವೈದ್ಯರು
ಆಪರೇಷನ್ ಬಳಿಕ ಶಿವರಾಜ್​ಕುಮಾರ್ ಹೆಲ್ತ್​ಅಪ್​ಡೇಟ್ ನೀಡಿದ ವೈದ್ಯರು