Updated on:Dec 20, 2022 | 4:40 PM
Kannada serial actress Shwetha Prasad invited by Saudi Arabia tourism department
ಶ್ವೇತಾ ಪ್ರಸಾದ್ ಅವರು ಆರು ದಿನಗಳ ಸೌದಿ ಅರೇಬಿಯಾ ಪ್ರವಾಸ ಮುಗಿಸಿ ವಾಪಸ್ಸಾಗಿದ್ದಾರೆ. ಈ ಬಗ್ಗೆ ಅವರು ಸಂತಸ ಹಂಚಿಕೊಂಡಿದ್ದಾರೆ. ‘ಒಂದು ಹೊಸ ಅನುಭವವನ್ನು ಈ ಪ್ರವಾಸ ನೀಡಿದೆ’ ಎಂದು ಅವರು ಹೇಳಿದ್ದಾರೆ.
‘ಆಹಾರ, ಆತಿಥ್ಯ ಎಲ್ಲವೂ ತುಂಬಾ ಚೆನ್ನಾಗಿತ್ತು. ಟ್ರಾಫಿಕ್ ನಿಯಂತ್ರಣಕ್ಕೆ ದಿ ಲೈನ್ ಎಂಬ ಹೊಸ ಮಾರ್ಗಗಳನ್ನು ಕಂಡು ಕೊಂಡಿದ್ದಾರೆ. ಭಾರತೀಯರ ಮೇಲೆ ಅಲ್ಲಿನವರು ವಿಶೇಷವಾದ ಪ್ರೀತಿಯನ್ನು ಹೊಂದಿದ್ದಾರೆ’ ಎಂದು ಶ್ವೇತಾ ಪ್ರಸಾದ್ ಹೇಳಿದ್ದಾರೆ.
ಧಾರಾವಾಹಿಯಿಂದ ಕೊಂಚ ಬ್ರೇಕ್ ಪಡೆದುಕೊಂಡಿರುವ ಶ್ವೇತಾ ಪ್ರಸಾದ್ ಸದ್ಯ ‘ಅರಿಹ’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರ ಈ ಹೊಸ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿವೆ.
Published On - 4:40 pm, Tue, 20 December 22