Shwetha Prasad: ಸೌದಿ ಅರೇಬಿಯಾದಲ್ಲಿ ‘ರಾಧಾ ರಮಣ’ ಧಾರಾವಾಹಿ ನಟಿ ಶ್ವೇತಾ ಪ್ರಸಾದ್ ಸೂಪರ್​ ಫೋಟೋಶೂಟ್​

| Updated By: ಮದನ್​ ಕುಮಾರ್​

Updated on: Dec 20, 2022 | 4:40 PM

Shwetha Prasad Photos: ಶ್ವೇತಾ ಪ್ರಸಾದ್ ಅವರು ಆರು ದಿನಗಳ ಸೌದಿ ಅರೇಬಿಯಾ ಪ್ರವಾಸ ಮುಗಿಸಿ ವಾಪಸ್ಸಾಗಿದ್ದಾರೆ. ಈ ಬಗ್ಗೆ ಅವರು ಸಂತಸ ಹಂಚಿಕೊಂಡಿದ್ದಾರೆ.

1 / 5
‘ಶ್ರೀರಸ್ತು ಶುಭಮಸ್ತು’, ‘ರಾಧಾ ರಮಣ’ ಧಾರಾವಾಹಿ ಖ್ಯಾತಿಯ ನಟಿ ಶ್ವೇತಾ ಪ್ರಸಾದ್ ಅವರು ‘ಕಳ್ಬೆಟ್ಟದ ದರೋಡೆಕೋರರು’ ಚಿತ್ರದ ಮೂಲಕ ಬೆಳ್ಳಿ ಪರದೆಯಲ್ಲೂ ಮಿಂಚಿದರು. ಇತ್ತೀಚೆಗೆ ಅವರನ್ನು ಸೌದಿ ಅರೇಬಿಯಾ ಪ್ರವಾಸೋದ್ಯಮ ಪ್ರಾಧಿಕಾರ ಆಹ್ವಾನಿಸಿ ಆತಿಥ್ಯ ನೀಡಿದೆ.

2 / 5
ಸೌದಿ ಅರೇಬಿಯಾ ಪ್ರವಾಸೋದ್ಯಮ ಪ್ರಾಧಿಕಾರವು ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಬೇರೆ ಬೇರೆ ದೇಶದ ಸೆಲೆಬ್ರಿಟಿಗಳನ್ನು ತನ್ನ ದೇಶಕ್ಕೆ ಆಹ್ವಾನಿಸುತ್ತಿದೆ. ಕನ್ನಡದಿಂದ ಆಹ್ವಾನಿಸಲ್ಪಟ್ಟ ಮೊದಲ ನಟಿ ಎಂಬ ಹೆಗ್ಗಳಿಕೆಗೆ ಶ್ವೇತಾ ಪ್ರಸಾದ್​ ಪಾತ್ರರಾಗಿದ್ದಾರೆ.

3 / 5
ಶ್ವೇತಾ ಪ್ರಸಾದ್ ಅವರು ಆರು ದಿನಗಳ ಸೌದಿ ಅರೇಬಿಯಾ ಪ್ರವಾಸ ಮುಗಿಸಿ ವಾಪಸ್ಸಾಗಿದ್ದಾರೆ. ಈ ಬಗ್ಗೆ ಅವರು ಸಂತಸ ಹಂಚಿಕೊಂಡಿದ್ದಾರೆ. ‘ಒಂದು ಹೊಸ ಅನುಭವವನ್ನು ಈ ಪ್ರವಾಸ ನೀಡಿದೆ’ ಎಂದು ಅವರು ಹೇಳಿದ್ದಾರೆ.

4 / 5
‘ಆಹಾರ, ಆತಿಥ್ಯ ಎಲ್ಲವೂ ತುಂಬಾ ಚೆನ್ನಾಗಿತ್ತು. ಟ್ರಾಫಿಕ್ ನಿಯಂತ್ರಣಕ್ಕೆ ದಿ ಲೈನ್ ಎಂಬ ಹೊಸ ಮಾರ್ಗಗಳನ್ನು ಕಂಡು ಕೊಂಡಿದ್ದಾರೆ. ಭಾರತೀಯರ ಮೇಲೆ ಅಲ್ಲಿನವರು ವಿಶೇಷವಾದ ಪ್ರೀತಿಯನ್ನು ಹೊಂದಿದ್ದಾರೆ’ ಎಂದು ಶ್ವೇತಾ ಪ್ರಸಾದ್​ ಹೇಳಿದ್ದಾರೆ.

5 / 5
ಧಾರಾವಾಹಿಯಿಂದ ಕೊಂಚ ಬ್ರೇಕ್ ಪಡೆದುಕೊಂಡಿರುವ ಶ್ವೇತಾ ಪ್ರಸಾದ್ ಸದ್ಯ ‘ಅರಿಹ’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರ ಈ ಹೊಸ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿವೆ.

Published On - 4:40 pm, Tue, 20 December 22