- Kannada News Photo gallery Kannada serial actress Vaishnavi Gowda marriage with Anukool Mishra See photos
ನೆರವೇರಿತು ಕಿರುತೆರೆ ನಟಿ ವೈಷ್ಣವಿ ಗೌಡ ಮದುವೆ; ಇಲ್ಲಿವೆ ಸಂಭ್ರಮದ ಫೋಟೋಗಳು
ಸೀರಿಯಲ್ ನಟಿ ವೈಷ್ಣವಿ ಗೌಡ ಅವರು ಸಪ್ತಪದಿ ತುಳಿದಿದ್ದಾರೆ. ಅನುಕೂಲ್ ಮಿಶ್ರಾ ಜೊತೆ ಅವರ ಮದುವೆ ನೆರವೇರಿದೆ. ಈ ವಿವಾಹ ಸಮಾರಂಭಕ್ಕೆ ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಅನೇಕರು ಸಾಕ್ಷಿ ಆಗಿದ್ದಾರೆ. ಮದುವೆ ಬಳಿಕ ವೈಷ್ಣವಿ ಗೌಡ ಅವರು ಸುಂದರ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Updated on: Jun 06, 2025 | 6:02 PM

‘ಅಗ್ನಿಸಾಕ್ಷಿ’, ‘ಸೀತಾರಾಮ’ ಧಾರಾವಾಹಿ ಮೂಲಕ ಮನೆಮಾತಾದ ನಟಿ ವೈಷ್ಣವಿ ಗೌಡ ಅವರು ಹಸೆಮಣೆ ಏರಿದ್ದಾರೆ. ಬಹಳ ಗ್ರ್ಯಾಂಡ್ ಆಗಿ ಅವರ ಮದುವೆ ನೆರವೇರಿದೆ. ಮದುವೆಯ ಫೋಟೋಗಳು ವೈರಲ್ ಆಗಿವೆ. ಫ್ಯಾನ್ಸ್ ಅಭಿನಂದನೆ ತಿಳಿಸುತ್ತಿದ್ದಾರೆ.

ವೈಷ್ಣವಿ ಗೌಡ ಅವರು ಮದುವೆ ಆಗಿರುವ ಹುಡುಗನ ಹೆಸರು ಅನುಕೂಲ್ ಮಿಶ್ರಾ. ಏರ್ಫೋರ್ಸ್ ಆಫೀಸರ್ ಆಗಿ ಅವರು ಕೆಲಸ ಮಾಡುತ್ತಿದ್ದಾರೆ. ಅನುಕೂಲ್ ಮಿಶ್ರಾ ಮತ್ತು ವೈಷ್ಣವಿ ಗೌಡ ಅವರದ್ದು ಲವ್ ಮ್ಯಾರೇಜ್ ಅಲ್ಲ, ಅಪ್ಪಟ ಅರೇಂಜ್ ಮ್ಯಾರೇಜ್.

ಅಮೂಲ್ಯ, ವಿಜಯ್ ಸೂರ್ಯ, ನಿವೇದಿತಾ ಗೌಡ, ಅಲೋಕ್, ಕಾರುಣ್ಯ ರಾಮ್ ಮುಂತಾದ ಸೆಲೆಬ್ರಿಟಿಗಳು ಈ ಮದುವೆಗೆ ಹಾಜರಿ ಹಾಕಿದ್ದಾರೆ. ಮದುವೆಯಲ್ಲಿ ಸೆಲೆಬ್ರಿಟಿಗಳೆಲ್ಲ ಕುಣಿದು ಕುಪ್ಪಳಿಸಿದ್ದಾರೆ. ವೈಷ್ಣವಿ ಗೌಡ ವಿವಾಹ ಅದ್ದೂರಿಯಾಗಿ ನಡೆದಿದೆ.

ಅನೇಕ ವರ್ಷಗಳಿಂದ ವೈಷ್ಣವಿ ಗೌಡ ಅವರು ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ. ಸೀರಿಯಲ್ನಲ್ಲಿ ನಟಿಸುವ ಮೂಲಕ ಅಪಾರ ಖ್ಯಾತಿ ಗಳಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 8’ ರಿಯಾಲಿಟಿ ಶೋನಲ್ಲೂ ವೈಷ್ಣವಿ ಗೌಡ ಅವರು ಸ್ಪರ್ಧಿಸಿದ್ದರು.

ವೈಷ್ಣವಿ ಗೌಡ ಅವರಿಗೆ ಮೊದಲಿನಿಂದಲೂ ಮದುವೆ ಪ್ರಪೋಸಲ್ ಬರುತ್ತಿದ್ದವು. ಆದರೆ ಯಾವುದನ್ನೂ ಅವರು ಒಪ್ಪಿಕೊಂಡಿರಲಿಲ್ಲ. ಅಂತಿಮವಾಗಿ ಉತ್ತರ ಭಾರತದ ಅನುಕೂಲ್ ಮಿಶ್ರಾ ಜೊತೆ ವೈಷ್ಣವಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.









