Updated on: Jul 14, 2022 | 10:25 PM
ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಅವರು ಭುವನೇಶ್ವರಿ ಎಂದೇ ಫೇಮಸ್. ಅವರನ್ನು ಇನ್ಸ್ಟಾಗ್ರಾಮ್ನಲ್ಲಿ ಲಕ್ಷಾಂತರ ಮಂದಿ ಹಿಂಬಾಲಿಸುತ್ತಿದ್ದಾರೆ. ಅಭಿಮಾನಿಗಳ ಜತೆ ನಿರಂತರವಾಗಿ ಸಂಪರ್ಕದಲ್ಲಿರಲು ಸೋಶಿಯಲ್ ಮೀಡಿಯಾದಲ್ಲಿ ರಂಜನಿ ಸಾಕಷ್ಟು ಫೋಟೋ ಹಂಚಿಕೊಳ್ಳುತ್ತಿರುತ್ತಾರೆ.
ಈಗ ರಂಜನಿ ಅವರು ಪುಣೆಯ ಶನಿವಾರ್ ವಾಡಾಗೆ ಭೇಟಿ ನೀಡಿದ್ದಾರೆ. ಅಲ್ಲಿ ಸಮಯ ಕಳೆದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಬಂದಿದೆ.
‘ಪುಣೆಯ ಶನಿವಾರ್ ವಾಡಾ ಅಂದ್ರೆ ನನಗೆ ‘ಬಾಜಿರಾವ್ ಮಸ್ತಾನಿ’ ಸಿನಿಮಾ ನೆನಪಾಗುತ್ತೆ’ ಎಂದು ರಂಜನಿ ಬರೆದುಕೊಂಡಿದ್ದಾರೆ. ಅವರು ಹೀಗೆ ಬರೆದುಕೊಳ್ಳುವುದಕ್ಕೂ ಕಾರಣ ಇದೆ.
2015ರಲ್ಲಿ ತೆರೆಗೆಬಂದ ‘ಬಾಜಿರಾವ್ ಮಸ್ತಾನಿ’ ಸಿನಿಮಾ ಶನಿವಾರ್ ವಾಡಾದಲ್ಲಿಯೇ ಶೂಟ್ ಆಗಿತ್ತು. ಈ ಚಿತ್ರ ಸೂಪರ್ ಹಿಟ್ ಸಾಲಿನಲ್ಲಿದೆ. ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ಈ ಚಿತ್ರಕ್ಕೆ ಸಂಜಯ್ ಲೀಲಾ ಬನ್ಸಾಲಿ ಆ್ಯಕ್ಷನ್ ಕಟ್ ಹೇಳಿದ್ದರು.
ರಂಜನಿ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದಾರೆ. ದಿನೇದಿನೇ ಅವರ ಅಭಿಮಾನಿ ಬಳಗ ದೊಡ್ಡದಾಗುತ್ತಿದೆ.