Ranjani Raghavan: ಗೂಗಲ್ ಸೀರೆ ಉಟ್ಟು ಮಿಂಚಿದ ನಟಿ ರಂಜನಿ ರಾಘವನ್
ನಟಿ ರಂಜನಿ ರಾಘವನ್ ಅವರು ಗೂಗಲ್ ಎಂದು ಬರೆದುಕೊಂಡಿರುವ ಸೀರೆಯನ್ನು ಉಟ್ಟಿದ್ದಾರೆ. ಈ ಫೋಟೋಗಳನ್ನು ಅವರು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ‘ಹೆಣ್ಮಕ್ಕಳ ಮನಸ್ಸು ಅರ್ಥ ಆಗಲ್ಲ ಅನ್ನೋರು Google me’ ಎಂದು ಬರೆದುಕೊಂಡಿದ್ದಾರೆ.
Updated on: Jul 30, 2022 | 3:04 PM

ನಟಿ ರಂಜನಿ ರಾಘವನ್ ಅವರು ಇನ್ಸ್ಟಾಗ್ರಾಮ್ನಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಈಗ ಅವರು ಹೊಸ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಸಾಕಷ್ಟು ಗಮನ ಸೆಳೆಯುತ್ತಿದೆ.

ನಟಿ ರಂಜನಿ ರಾಘವನ್ ಅವರು ಗೂಗಲ್ ಎಂದು ಬರೆದುಕೊಂಡಿರುವ ಸೀರೆಯನ್ನು ಉಟ್ಟಿದ್ದಾರೆ. ಈ ಫೋಟೋಗಳನ್ನು ಅವರು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ‘ಹೆಣ್ಮಕ್ಕಳ ಮನಸ್ಸು ಅರ್ಥ ಆಗಲ್ಲ ಅನ್ನೋರು Google me’ ಎಂದು ಬರೆದುಕೊಂಡಿದ್ದಾರೆ.

ರಂಜನಿ ರಾಘವನ್ ಅವರ ಫೋಟೋ ಹಾಗೂ ಕ್ಯಾಪ್ಶನ್ ಫ್ಯಾನ್ಸ್ಗೆ ಇಷ್ಟವಾಗಿದೆ. ಈ ಬಗ್ಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಸಾವಿರಾರು ಮಂದಿ ಈ ಫೋಟೋವನ್ನು ಲೈಕ್ ಮಾಡಿದ್ದಾರೆ.

‘ಕನ್ನಡತಿ’ ಧಾರಾವಾಹಿ ಮೂಲಕ ರಂಜನಿ ರಾಘವನ್ ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಇದರ ಜತೆಗೆ ಅವರು ಹಿರಿತೆರೆಯಲ್ಲೂ ಬ್ಯುಸಿ ಆಗಿದ್ದಾರೆ.

ರಂಜನಿ ರಾಘವನ್ ನಟನೆಯ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾ ಇತ್ತೀಚೆಗೆ ಒಟಿಟಿಯಲ್ಲಿ ರಿಲೀಸ್ ಆಗಿದೆ. ದಿಗಂತ್ ಅವರು ಈ ಚಿತ್ರದ ಹೀರೋ.