ಭಾರತ ಕೌಶಲ್ಯ ಸ್ಪರ್ಧೆಯಲ್ಲಿ ಚಿನ್ನ ಸೇರಿ 42 ಪದಕ ಗೆದ್ದ ಕನ್ನಡಿಗರು
ದೆಹಲಿಯಲ್ಲಿ ನಡೆದ ಭಾರತ ಕೌಶಲ್ಯ ಸ್ಪರ್ಧೆಯಲ್ಲಿ ಕನ್ನಡಿಗರು 42 ಪದಕಗಳನ್ನ ಗೆದ್ದು ದೇಶದಲ್ಲಿ 2ನೇ ಸ್ಥಾನ ಪಡೆದುಕೊಂಡಿದ್ದಾರೆ. ಇಂದು ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ಗೆ ಆಗಮಿದ ಸ್ಪರ್ಧಿಗಳನ್ನು ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹೂಗುಚ್ಛ ನೀಡುವ ಮೂಲಕ ಅದ್ಧೂರಿಯಾಗಿ ಸ್ವಾಗತ ಕೋರಿದ್ದಾರೆ.
Updated on: May 20, 2024 | 10:47 PM

ದೆಹಲಿಯಲ್ಲಿ ನಡೆದ ಭಾರತ ಕೌಶಲ್ಯ ಸ್ಪರ್ಧೆಯಲ್ಲಿ ಕನ್ನಡಿಗರು ಚಿನ್ನದ ಪದಕ ಗೆದ್ದುಕೊಂಡು ಬಂದಿದ್ದಾರೆ.

42 ಪದಕಗಳನ್ನ ಗೆದ್ದು ದೇಶದಲ್ಲಿ 2ನೇ ಸ್ಥಾನ ಪಡೆದ ಕನ್ನಡಿಗರನ್ನು ಇಂದು ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹೂಗುಚ್ಛ ನೀಡುವ ಮೂಲಕ ಅದ್ಧೂರಿಯಾಗಿ ಸ್ವಾಗತ ಕೋರಿದ್ದಾರೆ.

ವಿವಿಧ ವಿಭಾಗಗಳಲ್ಲಿ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕಗಳನ್ನ ಗೆಲ್ಲುವ ಮೂಲಕ ಯುವಕ ಹಾಗೂ ಯುವತಿಯರು ಕರುನಾಡಿಗೆ ಕೀರ್ತಿ ತಂದಿದ್ದಾರೆ.

30 ರಾಜ್ಯಗಳ 900 ಕ್ರೀಡಾಪಟುಗಳ ನಡುವೆ ಸ್ಪರ್ಧೆ ನಡೆದಿದ್ದು, ಕೌಶಲ್ಯಾಭಿವೃದ್ಧಿ ಇಲಾಖೆ ಗ್ರಾಮೀಣ ಭಾಗದ ಪ್ರತಿಭೆಗಳನ್ನು ಗುರುತಿಸಿ ಕಳಿಸಿದ್ದರು.

ಇನ್ನು ಮುಂದೆ ಸೆಪ್ಟೆಂಬರ್ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲೂ ಸ್ಪರ್ಧೆ ಮಾಡಲಿದ್ದಾರೆ.

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.
Read More



