
‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಅವರು ಅಪಾರ ದೈವ ಭಕ್ತ. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಬಿಡುಗಡೆಗೆ ಸಕಲ ಸಿದ್ಧತೆ ಮಾಡಿಕೊಂಡಿರುವ ಅವರು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ರಿಷಬ್ ಶೆಟ್ಟಿ ಮತ್ತು ಅವರ ಪತ್ನಿ ಪ್ರಗತಿ ಶೆಟ್ಟಿ ಅವರು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಬಂದು ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಪ್ರಗತಿ ಶೆಟ್ಟಿ ಅವರು ಕನ್ನಡ ಚಿತ್ರರಂಗದಲ್ಲಿ ವಸ್ತ್ರ ವಿನ್ಯಾಸಕಿಯಾಗಿ ಗುರುತಿಸಿಕೊಂಡಿದ್ದಾರೆ. ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಸಿನಿಮಾಗೂ ಪ್ರಗತಿ ಶೆಟ್ಟಿ ಅವರೇ ಕಾಸ್ಟ್ಯೂಮ್ ಡಿಸೈನ್ ಮಾಡಿದ್ದಾರೆ.

ರಿಷಬ್ ಶೆಟ್ಟಿ ಅವರ ವೃತ್ತಿ ಜೀವನದಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಹುದೊಡ್ಡ ಪ್ರಾಜೆಕ್ಟ್. ‘ಹೊಂಬಾಳೆ ಫಿಲ್ಮ್ಸ್’ ಮೂಲಕ ನಿರ್ಮಾಣ ಆದ ಈ ಸಿನಿಮಾಗೆ ಬಹುಕೋಟಿ ರೂಪಾಯಿ ಬಂಡವಾಳ ಹೂಡಲಾಗಿದೆ.

ಇತ್ತೀಚೆಗೆ ರಿಲೀಸ್ ಆದ ಟ್ರೇಲರ್ ಮೂಲಕ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸಿಕ್ಕಾಪಟ್ಟೆ ಹೈಪ್ ಸೃಷ್ಟಿಸಿದೆ. ರಿಷಬ್ ಶೆಟ್ಟಿ ಅವರು ಪ್ರಮುಖ ಪಾತ್ರ ಮಾಡುವುದರ ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ.