
‘ಕಾಂತಾರ’ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಂಡಿದೆ. ಈ ಚಿತ್ರ 400 ಕೋಟಿ ರೂಪಾಯಿ ಬಾಚುವುದರ ಜತೆಗೆ ಒಟಿಟಿಗೂ ಲಗ್ಗೆ ಇಟ್ಟಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸಿನಿಮಾ ಪ್ರಸಾರ ಕಂಡಿದೆ.

ಸಿನಿಮಾ ಗೆದ್ದ ಖುಷಿಯಲ್ಲಿ ಚಿತ್ರತಂಡ ಸಕ್ಸಸ್ ಮೀಟ್ ಮಾಡಿದೆ. ಈ ಭೇಟಿ ವರ್ಣರಂಜಿತವಾಗಿತ್ತು. ಈ ಫೋಟೋಗಳು ಈಗ ವೈರಲ್ ಆಗಿವೆ.

ಹೊಂಬಾಳೆ ಫಿಲ್ಮ್ಸ್ನ ವಿಜಯ್ ಕಿರಗಂದೂರು, ನಟ ರಿಷಬ್ ಶೆಟ್ಟಿ, ನಟಿ ಸಪ್ತಮಿ ಗೌಡ, ಪ್ರಮೋದ್ ಶೆಟ್ಟಿ ಹಾಗೂ ತಂಡದವರು ಒಂದೆಡೆ ಸೇರಿದ್ದಾರೆ. ಇವರ ಜತೆ ಮಲಯಾಳಂ ನಟ ಫಹಾದ್ ಫಾಸಿಲ್ ಕೂಡ ಇದ್ದರು.

‘ಧೂಮಂ’ ಸಿನಿಮಾದಲ್ಲಿ ಫಹಾದ್ ಫಾಸಿಲ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡುತ್ತಿದೆ. ಪವನ್ ಕುಮಾರ್ ನಿರ್ದೇಶನ ಚಿತ್ರಕ್ಕಿದೆ.

‘ಕಾಂತಾರ’ ಸಿನಿಮಾ ನವೆಂಬರ್ 24ರಂದು ಒಟಿಟಿಗೆ ಲಗ್ಗೆ ಇಟ್ಟಿದೆ. ಥಿಯೇಟರ್ನಲ್ಲಿ ಅಬ್ಬರಿಸಿದ ಈ ಸಿನಿಮಾ ಒಟಿಟಿಯಲ್ಲೂ ಧೂಳೆಬ್ಬಿಸುವ ನಿರೀಕ್ಷೆ ಇದೆ.