
‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಪರಭಾಷೆಯ ಅನೇಕ ಸ್ಟಾರ್ ಕಲಾವಿದರು ಈ ಚಿತ್ರವನ್ನು ಹಾಡಿ ಹೊಗಳಿದ್ದಾರೆ. ರಜನಿಕಾಂತ್ ಅವರಿಗೂ ‘ಕಾಂತಾರ’ ತುಂಬ ಇಷ್ಟ ಆಗಿದೆ.

ರಜನಿಕಾಂತ್ ಅವರು ‘ಕಾಂತಾರ’ ನೋಡಿ ಟ್ವೀಟರ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಸಿನಿಮಾ ಬಗ್ಗೆ ಪ್ರಶಂಸೆಯ ಮಾತುಗಳನ್ನು ಆಡಿದ್ದರು. ಈಗ ಅವರನ್ನು ಭೇಟಿ ಆಗುವ ಚಾನ್ಸ್ ರಿಷಬ್ ಶೆಟ್ಟಿಗೆ ಸಿಕ್ಕಿದೆ.

ರಿಷಬ್ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನದಲ್ಲಿ ‘ಕಾಂತಾರ’ ಸಿನಿಮಾ ಮೂಡಿಬಂದಿದೆ. ‘ಸೂಪರ್ ಸ್ಟಾರ್’ ರಜನಿಕಾಂತ್ ನಿವಾಸಕ್ಕೆ ಭೇಟಿ ನೀಡಿರುವ ರಿಷಬ್ ಅವರು, ಒಂದಷ್ಟು ಮಾತುಕಥೆ ನಡೆಸಿದ್ದಾರೆ.

ರಜನಿಕಾಂತ್ ಅವರ ಕಾಲಿಗೆ ಬಿದ್ದು ನಮಸ್ಕರಿಸಿ, ಆಶೀರ್ವಾದ ಪಡೆದಿದ್ದಾರೆ ರಿಷಬ್ ಶೆಟ್ಟಿ. ಈ ಫೋಟೋಗಳನ್ನು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದೆ. ಇವು ಸಿಕ್ಕಾಪಟ್ಟೆ ವೈರಲ್ ಆಗಿವೆ.

‘ಕಾಂತಾರ’ ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಕಳೆದಿದೆ. ಇಂದಿಗೂ ಹಲವು ಕಡೆಗಳಲ್ಲಿ ಈ ಚಿತ್ರ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಬೇರೆ ಭಾಷೆಗಳಿಗೂ ಡಬ್ ಆಗಿ ಸೂಪರ್ ಹಿಟ್ ಆಗಿದೆ. ನೂರಾರು ಕೋಟಿ ರೂಪಾಯಿ ಗಳಿಕೆ ಮಾಡಿದೆ.