
ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆ ವಿಧಾನ ಪರಿಷತ್ನಲ್ಲಿ ಬಿಜೆಪಿಗೆ ಹೊಡೆತ ಕೊಟ್ಟಿದೆ.

ವಿಧಾನಸಭೆಗೆ ಟಿಕೆಟ್ ನೀಡದ್ದಕ್ಕೆ ಮುನಿಸಿಕೊಂಡು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಒಬ್ಬರಿಂದೊಬ್ಬರು ಬಿಜೆಪಿ ತೊರೆಯುತ್ತಿದ್ದಾರೆ.

ಈಗಾಗಲೇ ಬಿಜೆಪಿ ವಿಧಾನಪರಿಸತ್ ಸದಸ್ಯರಾಗಿದ್ದ ಪುಟಣ್ಣ ಅವರು ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕಾಂಗ್ರೆಸ್ನಿಂದ ರಾಜಾಜಿನಗರ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಇನ್ನು ಮೈತ್ರಿ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಪ್ರಮುಖ ಪಾತ್ರವಹಿಸಿದ್ದ ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಈಗಾಗಲೇ ಬಹಿರಂಗವಾಗಿಯೇ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಕಾನೂನು ತೊಡಕು ಇರುವುದರಿಂದ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ

ಇನ್ನು ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಆಯನೂರು ಮಂಜುನಾಥ್ ಸಹ ವಿಧಾನಪರಿಷತ್ ಸದಸ್ಯತ್ವಕ್ಕೆ ಶೀಘ್ರವೇ ರಾಜೀನಾಮೆ ನೀಡುವುದಾಗಿ ಈಗಾಗಲೇ ಬಹಿರಂಗವಾಗಿಯೇ ಘೋಷಣೆ ಮಾಡಿದ್ದಾರೆ. ಆದ್ರೆ, ಶಿವಮೊಗ್ಗ ಟಿಕೆಟ್ ಯಾರಿಗೆ ನೀಡುತ್ತಾರೆ ಎನ್ನುವುದರ ಮೇಲೆ ಅವರ ತೀರ್ಮಾನ ನಿರ್ಧಾರವಾಗಲಿದೆ..

ರಾಣೇಬೆನ್ನೂರು ಕ್ಷೇತ್ರದ ಟಿಕೆಟ್ ಕೈತಪ್ಪಿದ್ದಕ್ಕೆ ಬಿಜೆಪಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ಆರ್. ಶಂಕರ್ ಇಂದು ರಾಜೀನಾಮೆ ನೀಡಲಿದ್ದಾರೆ.

ಸಭಾಪತಿ ಸೇರಿ ವಿಧಾನ ಪರಿಷತ್ ನಲ್ಲಿ 40 ಸದಸ್ಯ ಬಲ ಹೊಂದಿರುವ ಬಿಜೆಪಿ, ಸುದೀರ್ಘ ಸಮಯದ ಬಳಿಕ ವಿಧಾನ ಪರಿಷತ್ ನಲ್ಲಿ ಬಹುಮತ ಪಡೆದಿದೆ. ಆದ್ರೆ, ವಿಧಾನಸಭೆ ಚುನಾವಣೆ ಮುಗಿಯುವ ವೇಳೆಗೆ ಬಿಜೆಪಿ ಸದಸ್ಯ ಬಲ 40 ರಿಂದ 34 ಕ್ಕೆ ಕುಸಿಯುವ ಸಾಧ್ಯತೆ ಇದೆ.
Published On - 12:31 pm, Wed, 12 April 23