- Kannada News Photo gallery Karnataka Assembly Elections 2023 BJP Candidates list delaying reasons are here in Kannada
BJP Candidates List: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬಕ್ಕೆ ಕಾರಣಗಳು ಹಲವು; ಇಲ್ಲಿವೆ ನೋಡಿ
ರಾಜ್ಯ ವಿಧಾನಸಭೆ ಚುನಾವಣೆಗಾಗಿ ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಕಳೆದೆರಡು ದಿನಗಳಿಂದ ದೆಹಲಿಯಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಹೈಕಮಾಂಡ್ ಸಭೆ ನಡೆಸುತ್ತಿದೆ. ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಿರಿಯ ನಾಯಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಆದಾಗ್ಯೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗುತ್ತಿದ್ದು, ಇದಕ್ಕೆ ಕೆಲವು ಕಾರಣಗಳಿವೆ. ಅವುಗಳ ವಿವರ ಇಲ್ಲಿದೆ.
Updated on: Apr 10, 2023 | 4:26 PM

ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆ ವಿಧಾನ ಪರಿಷತ್ನಲ್ಲಿ ಬಿಜೆಪಿಗೆ ಹೊಡೆತ ಕೊಟ್ಟಿದೆ.

ತಮ್ಮ ಜೊತೆಗೆ ತಮ್ಮ ಪುತ್ರರಿಗೂ ಕೆಲವು ನಾಯಕರು ಟಿಕೆಟ್ ಕೇಳಿದ್ದಾರೆ. ಅಪ್ಪ, ಮಕ್ಕಳಿಗೆ ಟಿಕೆಟ್ ಕೊಡುವುದಾದರೆ ನಮಗೂ ಕೊಡಿ ಎಂದಿದ್ದಾರೆ. ಅಪ್ಪ ಮತ್ತು ಮಕ್ಕಳಿಗೆ ಟಿಕೆಟ್ ಕೊಟ್ಟರೆ ಗೆಲ್ಲುತ್ತಾ ಇಲ್ಲವಾ? ಮಕ್ಕಳಿಗೆ ಕ್ಷೇತ್ರಗಳು ಯಾವುವು ಅನ್ನೋ ಚರ್ಚೆ ನಡೆದಿದೆ.

ಎಂಎಲ್ಸಿಗಳು ಕೂಡ ಟಿಕೆಟ್ ಕೇಳುತ್ತಿದ್ದಾರೆ. ಲಕ್ಷ್ಮಣ ಸವದಿ, ಆಯನೂರು ಮಂಜುನಾಥ್, ಯೋಗೇಶ್ವರ್ ಟಿಕೆಟ್ ಕೇಳುತ್ತಿದ್ದಾರೆ. ಸಂಸದ ಕರಡಿ ಸಂಗಣ್ಣ ಕೂಡ ಟಿಕೆಟ್ ಕೇಳುತ್ತಿದ್ದಾರೆ.

ಕಾಂಗ್ರೆಸ್, ಜೆಡಿಎಸ್ ಘಟಾನುಘಟಿ ನಾಯಕರಿಗೆ ಖೆಡ್ಡಾ ತೋಡಲು, ಪ್ರಬಲ ಅಭ್ಯರ್ಥಿಗಳ ಹುಡುಕಾಟದಲ್ಲಿದೆ ಹೈಕಮಾಂಡ್. ಕೆಲವು ನಾಯಕರಿಗೆ ಎರಡು ಕ್ಷೇತ್ರಗಳಲ್ಲಿ ಟಿಕೆಟ್ ನೀಡುವ ಬಗ್ಗೆಯೂ ಚರ್ಚೆ ನಡೆದಿದೆ.

30ರಿಂದ 40 ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಯಾರಿಗೆ ಟಿಕೆಟ್ ಕೊಡಬೇಕು ಎಂದು ನಿರ್ಧರಿಸುವುದು ಕಷ್ಟವಾಗುತ್ತಿದೆ. ಕ್ಷೇತ್ರಗಳಿಂದ ಮತ್ತೊಮ್ಮೆ ಅಭಿಪ್ರಾಯ ಸಂಗ್ರಹಿಸಿ ವರದಿ ತರಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಎಲ್ಲಾ 224 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಿಯೇ ದೆಹಲಿಯಿಂದ ಹೊರಬೇಕು ಎಂದು ರಾಜ್ಯನಾಯಕರು ನಿರ್ಧರಿಸಿದ್ದಾರೆ. ಹೀಗಾಗಿ ಗೊಂದಲವಿರುವ ಕ್ಷೇತ್ರಗಳಲ್ಲಿ ಒಮ್ಮತದ ಅಭ್ಯರ್ಥಿ ಹೆಸರಿಸುವುದು ಕಷ್ಟವಾಗಿದೆ.




