- Kannada News Photo gallery Karnataka BJP MP BY raghavendra And jaggesh Meets DK Shivakumar In Bengaluru
ಡಿಕೆ ಶಿವಕುಮಾರ್ ಭೇಟಿ ಮಾಡಿದ ಬಿಜೆಪಿ ಸಂಸದರು: ಜಗ್ಗೇಶ್, ಬಿವೈ ರಾಘವೇಂದ್ರ ಹೇಳಿದ್ದೇನು?
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ಸಂಸದರು ಭೇಟಿಯಾಗಿದ್ದಾರೆ. ಇಂದು(ಜೂನ್ 12) ಬೆಂಗಳೂರಿನಲ್ಲಿ ಶಿವಮೊಗ್ಗ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಹಾಗೂ ಬಿಜೆಪಿ ರಾಜ್ಯಸಭಾ ಸದಸ್ಯ ಜಗ್ಗೇಶ್ ದಂಪತಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.
Updated on: Jun 12, 2023 | 4:05 PM

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ಸಂಸದರು ಭೇಟಿ ಮಾಡಿದರು.

ಬಿಎಸ್ ಯಡಿಯೂರಪ್ಪನವರ ಪುತ್ರ, ಶಿವಮೊಗ್ಗ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಅವರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ರಾಜ್ಯಸಭಾ ಸದಸ್ಯ ಜಗ್ಗೇಶ್ ದಂಪತಿ ಭೇಟಿ ಮಾಡಿ ಸನ್ಮಾನಿಸಿದರು.

ಸ್ನೇಹಿತನಾಗಿ ಡಿ.ಕೆ.ಶಿವಕುಮಾರ್ಗೆ ಅಭಿನಂದನೆ ಸಲ್ಲಿಸಲು ಬಂದಿದ್ದೇನೆ. ರಾಜ್ಯಸಭಾ ಸದಸ್ಯರಾಗಿ ಇಂದಿಗೆ 1 ವರ್ಷ ಪೂರೈಸಿದ್ದೇನೆ. ನನ್ನ ವ್ಯಾಪ್ತಿಯಲ್ಲಿ ಏನೆಲ್ಲ ಕೆಲಸ ಮಾಡಲು ಸಾಧ್ಯವೋ ಅದನ್ನ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಬಿವೈ ರಾಘವೇಂದ್ರ ಅವರು ಡಿಕೆ ಶಿವಕುಮಾರ್ ಭೇಟಿ ಮಾಡಿದ ಬಳಿಕ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.

ಮಹಾರಾಷ್ಟ್ರದ ಮಾಜಿ ಸಿಎಂ ದಿವಂಗತ ವಿಲಾಸ್‌ರಾವ್ ದೇಶಮುಖ್ ಅವರ ಪುತ್ರ ಲಾತೂರ್(ಗ್ರಾಮೀಣ) ಶಾಸಕ ಧೀರಜ್ ವಿ ದೇಶಮುಖ್ ಅವರು ಸಹ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಅಭಿನಂದಿಸಿದರು.
























