ಬೆಂಗಳೂರು ನಗರ ಅಂತಾರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದ ನಗರವಾಗಿದೆ. ಐಟಿ, ಬಿಟಿ, ಸಂಶೋಧನಾ
ವಲಯಗಳಂತಹ ಜ್ಞಾನಾಧಾರಿತ ಉದ್ದಿಮೆಗಳ ನೆಲೆಯಾಗಿದೆ. ಈ ಎಲ್ಲಾ ಕಾರಣಗಳಿಗೆ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರದಲ್ಲಿ ಜನ ಜೀವನ ಸುಗಮಗೊಳಿಸಲು ಎಲ್ಲಾ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು. ಸಂಚಾರ ದಟಣ್ಣೆ ನಿವಾರಣೆಗೆ ರೂಪಿಸಲಾದ ನಮ್ಮ ಮೆಟ್ರೋ, ಸಬ್ ಅರ್ಬನ್
ರೈಲು, ಪೆರಿಫೆರಲ್ ರಿಂಗ್ ರೋಡ್ ಮತ್ತಿತರ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಒತ್ತು ನೀಡಲಾಗುವುದು. ಜೊತೆಗೆ ನಗರದ ಪರಿಸರದಲ್ಲಿ ಕೆರೆಗಳ ಅಭಿವೃಧಿ ಹಾಗೂ
ಹಸಿರು ಹೊದಿಕೆ ಹೆಚ್ಚಿಸುವ ಮೂಲಕ ಸೌಂದರ್ಯ ವೃದ್ಧಗೂ ಆದ್ಯತೆ ನೀಡಲಾಗುವುದು.
ಬೆಂಗಳೂರು ನಗರದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 6,000 ಕೋಟಿ ರೂ.ಗಳ ವೆಚ್ಚದಲ್ಲಿ ‘ಅಮೃತ್
ನಗರೋತ್ಥಾನ’ ಯೋಜನೆಯನ್ನು ಮುಂದಿನ 3ವರ್ಷಗಳಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಯೋಜನೆಯಡಿಯಲ್ಲಿ ಪಾಲಿಕೆ ವ್ಯಾಪ್ತಿಯ ರಸ್ತೆ ಅಭಿವೃದಿ, ಗ್ರೇಡ್ ಸೆಪರೇಟರ್, ಕೆರೆ ಅಭಿವೃದ್ಧಿ, ಬೃಹತ್ ನೀರುಗಾಲುವೆ ಅಭಿವೃದ್ಧಿ, ಉದ್ಯಾನವನಗಳ ಅಭಿವೃದ್ಧಿ, ಕಟ್ಟಡಗಳು, ಘನತ್ಯಾಜ್ಯ ನಿರ್ವಹಣೆ, ಬೀದಿ ದೀಪಗಳು, ಕೊಳಚೆ ಪ್ರದೇಶ ಅಭಿವೃದ್ಧಿ ಇತ್ಯಾದಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
2021-22ನೇ ಸಾಲಿನಲ್ಲಿ ನಮ್ಮ ಮೆಟ್ರೊ ಹಂತ-2ರಲ್ಲಿ ಕಿ.ಮೀ.ಗಳ ಹೆಚ್ಚುವರಿ ಮಾರ್ಗವನ್ನು ಕಾರ್ಯಾರಂಭ
ಮಾಡಿದ್ದು, 2021-23ನೇ ಸಾಲಿನಲ್ಲಿ 33 ಕಿ.ಮೀ.ಗಳ ಮಾರ್ಗವನ್ನು ಸೇರಿಸಲಾಗುವುದು. ಇದರಿಂದ ಒಟ್ಟಾರೆ
೮೯ ಕಿ.ಮೀ.ಗಳ ಉದ್ದದ ಮೆಟ್ರೋ ಮಾರ್ಗವನ್ನು ಹೊಂದಿದಂತಾಗುತ್ತದೆ. ಬೆಂಗಳೂರು ಮೆಟ್ರೊ ಹಂತ-೩ ಯೋಜನೆಯನ್ನು ಅಂದಾಜು 11,250 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲು ವಿಸ್ತೃತ ಯೋಜನಾ ವರದಿಯನ್ನು (ಡಿ.ಪಿ.ಆರ್) ಕೇಂದ್ರ ಸರ್ಕಾರದ ಅನುಮೋದನೆಗೆ ಸಲ್ಲಿಸಲಾಗುವುದು. 2021-23ನೇ ಸಾಲಿನಲ್ಲಿ ೩೭ ಕಿ.ಮೀ. ಉದ್ದದ ಸರ್ಜಾಪುರದಿಂದ ಅಗರ, ಕೋರಮಂಗಲ ಮತ್ತು ಡೈರಿ ವೃತ್ತದ ಮೂಲಕ ಹೆಬ್ಬಾಳದವರೆಗೆ ೧೫,೦೦೦ ಕೋಟಿ ರೂ. ಅಂದಾಜು.
ಬೆಂಗಳೂರು ನಗರದ ರಸ್ತೆಗ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು 2006ರಿಂದ ನೆನಗುದಿಗೆ ಬಿದ್ದಿರುವ ತುಮಕೂರು ರಸ್ತೆಯಿಂದ ಬಳ್ಳಾರಿ ರಸ್ತೆ ಹಾಗೂ ಹಳೇ ಮದ್ರಾಸ್ ರಸ್ತೆಯನ್ನು ಹಾದು ಹೋಗಿ ಹೊಸೂರು ರಸ್ತೆ ಸೇರುವ ೭೩ ಕಿ.ಮೀ ಉದ್ದ ಹಾಗೂ ೧೦೦ ಮೀ ಅಗಲದ ಫೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಮಾಡಲು ಭೂ ಸ್ವಾಧೀನ ವೆಚ್ಚ ಸೇರಿ ೨೧,೦೯೧ ಕೋಟಿ ರೂ. ಅನುಮೋದನೆ.
ಗೊರಗುಂಟೆಪಾಳ್ಯ ಜಂಕ್ಷನ್ನಲ್ಲಿ ಸಂಚಾರ ದಟ್ಟಣೆ ನಿವಾರಿಸಿ, ಎಲ್ಲಾ ವಾಹನಗಳ ಸಿಗ್ನಲ್ ಮುಕ್ತ ಸಂಚಾರಕ್ಕೆ ಅನುವು
ಮಾಡಿಕೊಡಲು ಗ್ರೇಡ್ ಸೆಪರೇಟರ್ ಮತ್ತು ಮೇಲುಸೇತು ಕಾಮಗಾರಿಗಳನ್ನು ಬಿ.ಬಿ.ಎಂಪಿ., ಬಿ.ಡಿ.ಎ. ಮತ್ತು
ಎನ್.ಹೆಚ್.ಎ.ಐ ಸಂಸ್ಥೆಗಳ ವತಿಯಿಂದ ಜಂಟಿಯಾಗಿ ಕೈಗೆತ್ತಿಕೊಳ್ಳಲಾಗುವುದು.
ನಾಡಪ್ರಭು ಕೆಂಪೇಗೌಡ ಬಡಾವಣೆಯನ್ನು ನಿರ್ಮಿಸಲು ೨೬೭೧ ಎಕರೆ ಜಮೀನನ್ನು ಭೂಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ಬಡಾವಣೆ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿರುತ್ತದೆ. ಬಾಕಿ ೧೨೯೭ ಎಕರೆ ಜಮೀನಿನ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಆಧುನಿಕ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ.
ನಮ್ಮ ಸರ್ಕಾರವು ಬೆಂಗಳೂರಿನ ಆಯ್ದ ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಮೂಲಸೌಕರ್ಯ ಹಾಗೂ ಗುಣಮಟ್ಟದ ಶಿಕ್ಷಣ ಒದಗಿಸಲು ಸವಿವರವಾದ ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆ ಅಡಿಯಲ್ಲಿ ೮೯ ಕೋಟಿ ರೂ.ಗಳ ವೆಚ್ಚದಲ್ಲಿ ಬೆಂಗಳೂರಿನ ಆಯ್ದ ೨೦ ಶಾಲೆಗಳನ್ನು "ಬೆಂಗಳೂರು ಪಬ್ಲಿಕ್ ಶಾಲೆ"ಗಳಾಗಿ ಅಭಿವೃದ್ಧಿಪಡಿಸಲಾಗುವುದು.
ಬೆಂಗಳೂರಿನ ಮಡಿವಾಳ ಮತ್ತು ಎಲೆಮಲ್ಲಪ್ಪಶೆಟ್ಟಿ ಕೆರೆಗಳ ಸಮಗ್ರ ಅಭಿವೃದ್ಧಿಗೆ ಬಿ.ಬಿ.ಎಂ.ಪಿ ವತಿಯಿಂದ
ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು. ೩೧೦. ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗಾಗಿ ೨೦೨೨-೨೩ನೇ
ಸಾಲಿನ ಒಟ್ಟಾರೆಯಾಗಿ ೮,೪೦೯ ಕೋಟಿ ರೂ. ಅನುದಾನ ಒದಗಿಸಲಾಗಿದೆ.
ಬೆಂಗಳೂರು ಉಪನಗರ ರೈಲ್ವೆ ಯೋಜನೆಯನ್ನು ೧೫,೨೬೭ ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ೨೦೨೬ರ ವೇಳೆಗೆ
ಪೂರ್ಣಗೊಳಿಸಲು ಉದ್ದೇಶಿಸಿದೆ. ೧೪೮ ಕಿ.ಮೀ. ಉದ್ದದ ಈ ಯೋಜನೆ ಅಡಿ ನಾಲ್ಕು ಕಾರಿಡಾರ್‌ಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಚಿಕ್ಕಬಾಣಾವರ-ಬೈಯ್ಯಪ್ಪನಹಳ್ಳಿ ಕಾರಿಡಾರ್‌ನ ಸಿವಿಲ್ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದ್ದು, ಶೀಘ್ರವೇ ಕಾಮಗಾರಿಯನ್ನು ಆರಂಭಿಸಲಾಗುವುದು.
ಜಲ ಮಾಲಿನ್ಯ ತಡೆಗಟ್ಟಲು ಬೆಂಗಳೂರು ನಗರದ ವಿವಿಧ ಸ್ಥಳಗಳಲ್ಲಿರುವ ಹಳೆಯ ೨೦ ತ್ಯಾಜ್ಯ ನೀರು ಸಂಸ್ಕರಣಾ
ಘಟಕಗಳ ಪುನರುಜ್ಜೀವನ ಮತ್ತು ಉನ್ನತೀಕರಣದ ಕಾಮಗಾರಿಯಯನ್ನು ೧,೫೦೦ ಕೋಟಿ ರೂ.ಗಳ ವೆಚ್ಚ
ದಲ್ಲಿ ಬೆಂಗಳೂರು ಜಲಮಂಡಳಿ ವತಿಯಿಂದ ಕೈಗೊಳ್ಳಲಾಗುವುದು.
ಬೆಂಗಳೂರು ನಗರಕ್ಕೆ ಹೆಚ್ಚುವರಿಯಾಗಿ ೭೭೫ ದಶಲಕ್ಷ ಲೀಟರ್ ಕಾವೇರಿ ನೀರನ್ನು ತರಲು ೫,೫೫೦ ಕೋಟಿ ರೂ.ಗಳ ವೆಚ್ಚದಲ್ಲಿ ಕಾವೇರಿ ನೀರು ಸಬರಾಜು ಯೋಜನೆ (೫ನೇ ಹಂತ) ಜಾರಿಯಲ್ಲಿದ್ದು, ಇಲ್ಲಿಯವರೆಗೆ ೧,೫೫೬ ಕೋಟಿ ರೂ.ಗಳು ವೆಚ್ಚವಾಗಿದೆ. ಯೋಜನೆಯು ಪೂರ್ಣ ಪ್ರಮಾಣದಲ್ಲಿ ಪ್ರಗತಿಯಲ್ಲಿದ್ದು, ೨೦೨೪-೨೫ನೇ ಸಾಲಿನ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು.
ಮೆಗಾಸಿಟಿ ರಿವಾಲ್‌ವಿಂಗ್ ನಿಧಿ ಅಡಿಯಲ್ಲಿ ಅರ್ಕಾವತಿ ನೀರಿನ ಮೂಲವನ್ನು ಪುನರುಜ್ಜೀವನಗೊಳಿಸುವುದರ ಜೊತೆಗೆ ಎತ್ತಿನಹೊಳೆ ಯೋಜನೆಯಿಂದ ೧.೭ ಟಿ.ಎಂ.ಸಿ. ನೀರನ್ನು ಯೋಜನಾಬದ್ಧವಾಗಿ ಬಳಸಿಕೊಳ್ಳುವ
ಸಲುವಾಗಿ ೩೧೨ ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳುತ್ತಿರುವ ತಿಪ್ಪಗೊಂಡನಹಳ್ಳಿ ಜಲಾಶಯ ಪುನಶ್ಚೇತನ ಕಾಮಗಾರಿಯನ್ನು ೨೦೨೨-೨೩ನೇ ಸಾಲಿನಲ್ಲಿ ಮುಕ್ತಾಯಗೊಳಿಸಲಾಗುವುದು.
Published On - 5:00 pm, Fri, 4 March 22