Karnataka Budget Highlights: ಜೋಗ ಜಲಪಾತ, ಯಾಣ, ನಂದಿ ಬೆಟ್ಟಕ್ಕೆ ರೋಪ್ ವೇ; ಬಜೆಟ್​ನಲ್ಲಿ ಪ್ರವಾಸೋದ್ಯಕ್ಕೆ ಸಿಕ್ಕ ಕೊಡುಗೆ ಇಲ್ಲಿದೆ

Karnataka Budget 2022: ಈ ಬಾರಿಯ ಕರ್ನಾಟಕದ ಬಜೆಟ್​ನಲ್ಲಿ ಪ್ರವಾಸೋದ್ಯಮ ವಲಯಕ್ಕೂ ಆದ್ಯತೆ ನೀಡಲಾಗಿದೆ. ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣಗಳಾದ ಹಂಪಿ, ಬಾದಾಮಿ, ಐಹೊಳೆ, ಬೇಲೂರು, ಹಳೆಬೀಡು, ಜೋಗ ಜಲಪಾತ, ನಂದಿ ಬೆಟ್ಟ, ಮುಳ್ಳಯ್ಯನಗಿರಿ, ಚಾಮುಂಡಿ ಬೆಟ್ಟ ಮುಂತಾದ ಸ್ಥಳಗಳಿಗೆ ಬಜೆಟ್​ನಲ್ಲಿ ಅನುಮಾನ ಘೋಷಿಸಲಾಗಿದೆ.

| Updated By: ಸುಷ್ಮಾ ಚಕ್ರೆ

Updated on:Mar 04, 2022 | 3:34 PM

ಹಂಪಿ-ಬಾದಾಮಿ-ಐಹೊಳೆ-ಪಟ್ಟದಕಲ್ಲು-ವಿಜಯಪುರ ಪ್ರವಾಸಿ ವೃತ್ತವನ್ನು ಮತ್ತು ಮೈಸೂರು-ಶ್ರೀರಂಗಪಟ್ಟಣ-ಹಾಸನ-ಬೇಲೂರು-ಹಳೇಬೀಡು ಪ್ರವಾಸಿ ವೃತ್ತ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು.

ಉತ್ತರ ಕನ್ನಡ ಜಿಲ್ಲೆಯ ಯಾಣದಲ್ಲಿ ರೋಪ್‍ವೇ ನಿರ್ಮಾಣಕ್ಕೆ ಕ್ರಮ.

1 / 10
ಉತ್ತರ ಕನ್ನಡ ಜಿಲ್ಲೆಯ ಯಾಣದಲ್ಲಿ ರೋಪ್‍ವೇ ನಿರ್ಮಾಣಕ್ಕೆ ಕ್ರಮ.

ಉತ್ತರ ಕನ್ನಡ ಜಿಲ್ಲೆಯ ಯಾಣದಲ್ಲಿ ರೋಪ್‍ವೇ ನಿರ್ಮಾಣಕ್ಕೆ ಕ್ರಮ.

2 / 10
ಹಳೇಬೀಡು

ಬೇಲೂರು, ಹಳೇಬೀಡು, ಸೋಮನಾಥಪುರಗಳನ್ನು ಒಳಗೊಂಡಂತೆ ಹೊಯ್ಸಳರ ಸ್ಮಾರಕಗಳನ್ನು ಪ್ರಸಕ್ತ ಸಾಲಿನಲ್ಲಿ ಯುನೆಸ್ಕೊ ವಿಶ್ವ ಪರಂಪರೆ ತಾಣಗಳ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲಾಗುವುದು.

3 / 10
ಬೀದರ್

ಪಾರಂಪರಿಕ ಪ್ರವಾಸಿ ತಾಣಗಳಾದ ಬೀದರ್ ಹಾಗೂ ಕಲಬುರಗಿ ಕೋಟೆಗಳ ಪುನರುಜ್ಜೀವನಕ್ಕೆ ಕ್ರಮ. ರಾಜ್ಯದ ಸ್ಮಾರಕಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸಲು ಅಡಾಪ್ಡ್ ಎ ಮಾನ್ಯುಮೆಂಟ್ ಯೋಜನೆ ಜಾರಿ.

4 / 10
ಮೈಸೂರು ಅರಮನೆ

ಕರ್ನಾಟಕದ 15 ಪ್ರವಾಸಿ ತಾಣಗಳ ಆಡಿಯೋ, ವಿಡಿಯೋ ತುಣುಕುಗಳನ್ನು 15 ಕೋಟಿ ರೂ. ವೆಚ್ಚದಲ್ಲಿ ಸೃಜಿಸಲಾಗುವುದು. ಮೊದಲು ಪ್ರಾಯೋಗಿಕವಾಗಿ ಮೈಸೂರು ಅರಮನೆಯ ತುಣುಕುಗಳನ್ನು ಪ್ರಕಟಿಸಲಾಗುವುದು.

5 / 10
ಮುಳ್ಳಯ್ಯನಗಿರಿ

ಪರ್ವತ ಮಾಲಾ ಯೋಜನೆಯಡಿ ಮೈಸೂರಿನ ಚಾಮುಂಡಿ ಬೆಟ್ಟ ಹಾಗೂ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ದತ್ತಪೀಠಗಳಲ್ಲಿ ರೋಪ್‍ವೇ ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ.

6 / 10
ಜೋಗ ಜಲಪಾತ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತದಲ್ಲಿ 116 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಹೋಟೆಲ್ ಹಾಗೂ ರೋಪ್‍ವೇ ಅಭಿವೃದ್ಧಿ.

7 / 10
ಸಮುದ್ರ ತೀರ

ಕಡಲತೀರದ ಪ್ರವಾಸೋದ್ಯಮ ಉತ್ತೇಜನಕ್ಕೆ ಸಿಆರ್‌ಝೆಡ್ ಮಾನದಂಡಗಳನ್ನು ಸಡಿಲಗೊಳಿಸಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ ಅನುಮೋದನೆ ಪಡೆಯಲು ಕ್ರಮ. ತದಡಿ ಬಂದರಿನಲ್ಲಿ ಸಮಗ್ರ ಪರಿಸರ-ಪ್ರವಾಸೋದ್ಯಮ ಕೇಂದ್ರ ಅಭಿವೃದ್ಧಿ.

8 / 10
ಅಂಜನಾದ್ರಿ ಬೆಟ್ಟ

ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ 100 ಕೋಟಿ ರೂ. ವೆಚ್ಚದಲ್ಲಿ ಯೋಜನೆ.

9 / 10
ನಂದಿ ಬೆಟ್ಟ

ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ 93 ಕೋಟಿ ರೂ. ವೆಚ್ಚದಲ್ಲಿ ರೋಪ್‍ವೇ ನಿರ್ಮಾಣಕ್ಕೆ ಅನುಮೋದನೆ.

10 / 10

Published On - 3:23 pm, Fri, 4 March 22

Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ