AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿನ ‘RRR’ ಸಿನಿಮಾ ಪ್ರಚಾರದ ವೇದಿಕೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ; ಇಲ್ಲಿವೆ ಫೋಟೋಗಳು​

ಚಿಕ್ಕಬಳ್ಳಾಪುರದ ಅಗಲಗುರ್ಕಿ ಗ್ರಾಮದಲ್ಲಿ ಅದ್ದೂರಿಯಾಗಿ ‘ಆರ್​ಆರ್​ಆರ್​’ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಭಾಗಿ ಆಗಿದ್ದರು.

TV9 Web
| Edited By: |

Updated on: Mar 20, 2022 | 8:02 AM

Share
ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’ ಸಿನಿಮಾ ಮಾ.25ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ಪ್ರೀ-ರಿಲೀಸ್​ ಕಾರ್ಯಕ್ರಮವು ಚಿಕ್ಕಬಳ್ಳಾಪುರದಲ್ಲಿ ಶನಿವಾರ (ಮಾ.19) ನಡೆದಿದೆ. ಬೃಹತ್​ ವೇದಿಕೆಯಲ್ಲಿ ನಡೆದ ಈ ಇವೆಂಟ್​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯ ಅತಿಥಿ ಆಗಿದ್ದರು.

Karnataka CM Basavaraj Bommai in RRR pre-release event in Chikkaballapura photos

1 / 5
ನಟರಾದ ರಾಮ್​ ಚರಣ್​, ಜ್ಯೂ. ಎನ್​ಟಿಆರ್​, ನಿರ್ದೇಶಕ ರಾಜಮೌಳಿ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್​, ನಟ ಶಿವರಾಜ್​ಕುಮಾರ್ ಮುಂತಾದ ಗಣ್ಯರು ವೇದಿಕೆ ಹಂಚಿಕೊಂಡರು. ಅದ್ದೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಅನೇಕ ವಿಚಾರಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು.

Karnataka CM Basavaraj Bommai in RRR pre-release event in Chikkaballapura photos

2 / 5
ಕಾರ್ಯಕ್ರಮದಲ್ಲಿ ತೆಲುಗು ನಟರಾದ ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕುಶಲೋಪರಿ ವಿಚಾರಿಸಿದರು. ಅವರ ಆಗಮನದಿಂದಾಗಿ ‘ಆರ್​ಆರ್​ಆರ್​’ ಪ್ರೀ-ರಿಲೀಸ್​ ಇವೆಂಟ್​ನ ಮೆರುಗು ಹೆಚ್ಚಿತು. ಲಕ್ಷಾಂತರ ಅಭಿಮಾನಿಗಳು ಇದರಲ್ಲಿ ಭಾಗಿಯಾಗಿದ್ದರು.

3 / 5
ತೆಲುಗಿನ ‘RRR’ ಸಿನಿಮಾ ಪ್ರಚಾರದ ವೇದಿಕೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ; ಇಲ್ಲಿವೆ ಫೋಟೋಗಳು​

‘ಆರ್​ಆರ್​ಆರ್’ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ನಟ ಪುನೀತ್​ ರಾಜ್​ಕುಮಾರ್​ ಅವರಿಗೆ ನಮನ ಸಲ್ಲಿಸಲಾಯಿತು. ‘ಅಪ್ಪುನನ್ನು ಹೇಗೆ ನಾನು ಮರೆಯಲು ಸಾಧ್ಯ? ಎಲ್ಲಿ ನೋಡಿದರೂ ನನಗೆ ಅಪ್ಪು ಕಾಣಿಸುತ್ತಾರೆ. ಪ್ರತಿಯೊಬ್ಬ ಕನ್ನಡಿಗರಲ್ಲಿ ಶಾಶ್ವತವಾದ ಸ್ಥಾನವನ್ನು ಪುನೀತ್​ ಪಡೆದುಕೊಂಡಿದ್ದಾರೆ’ ಎಂದು ಬೊಮ್ಮಾಯಿ ಹೇಳಿದರು.

4 / 5
ತೆಲುಗಿನ ‘RRR’ ಸಿನಿಮಾ ಪ್ರಚಾರದ ವೇದಿಕೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ; ಇಲ್ಲಿವೆ ಫೋಟೋಗಳು​

ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಪೊಲೀಸ್​ ಬಿಗಿ ಬಂದೋಬಸ್ತ್​ ಮಾಡಲಾಗಿತ್ತು. ಲೇಸರ್​ ಶೋ ಸಹ ಗಮನ ಸೆಳೆಯಿತು.

5 / 5