
ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಸಿನಿಮಾ ಮಾ.25ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮವು ಚಿಕ್ಕಬಳ್ಳಾಪುರದಲ್ಲಿ ಶನಿವಾರ (ಮಾ.19) ನಡೆದಿದೆ. ಬೃಹತ್ ವೇದಿಕೆಯಲ್ಲಿ ನಡೆದ ಈ ಇವೆಂಟ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯ ಅತಿಥಿ ಆಗಿದ್ದರು.

ನಟರಾದ ರಾಮ್ ಚರಣ್, ಜ್ಯೂ. ಎನ್ಟಿಆರ್, ನಿರ್ದೇಶಕ ರಾಜಮೌಳಿ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ನಟ ಶಿವರಾಜ್ಕುಮಾರ್ ಮುಂತಾದ ಗಣ್ಯರು ವೇದಿಕೆ ಹಂಚಿಕೊಂಡರು. ಅದ್ದೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಅನೇಕ ವಿಚಾರಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ತೆಲುಗು ನಟರಾದ ರಾಮ್ ಚರಣ್, ಜ್ಯೂ. ಎನ್ಟಿಆರ್ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕುಶಲೋಪರಿ ವಿಚಾರಿಸಿದರು. ಅವರ ಆಗಮನದಿಂದಾಗಿ ‘ಆರ್ಆರ್ಆರ್’ ಪ್ರೀ-ರಿಲೀಸ್ ಇವೆಂಟ್ನ ಮೆರುಗು ಹೆಚ್ಚಿತು. ಲಕ್ಷಾಂತರ ಅಭಿಮಾನಿಗಳು ಇದರಲ್ಲಿ ಭಾಗಿಯಾಗಿದ್ದರು.

