Sign In

By signing in or creating an account, you agree with Associated Broadcasting Company's Terms & Conditions and Privacy Policy.

Vishnuvardhan Smaraka: ವಿಷ್ಣುವರ್ಧನ್​ ಸ್ಮಾರಕ ಉದ್ಘಾಟನೆ; ಕೊನೆಗೂ ಈಡೇರಿತು ಅಭಿಮಾನಿಗಳ ಬಹುವರ್ಷದ ಬೇಡಿಕೆ

Vishnuvardhan Smaraka Photos: ‘ಸಾಹಸ ಸಿಂಹ’ ವಿಷ್ಣುವರ್ಧನ್​ ಅವರ ಸ್ಮಾರಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. ಇಂದು (ಜ.29) ನಡೆದ ಕಾರ್ಯಕ್ರಮದ ಕೆಲವು ಫೋಟೋಗಳು ಇಲ್ಲಿವೆ..

ಮದನ್​ ಕುಮಾರ್​
|

Updated on: Jan 29, 2023 | 6:21 PM

ವಿಷ್ಣುವರ್ಧನ್​ ಅವರು ನಿಧನರಾಗಿ ಹಲವು ವರ್ಷಗಳೇ ಕಳೆದಿದ್ದರೂ ಸ್ಮಾರಕ ನಿರ್ಮಾಣ ಆಗಿರಲಿಲ್ಲ. ಆದರೆ ಇಂದು (ಜ.29) ಮೈಸೂರಿನಲ್ಲಿ ಭವ್ಯವಾದ ಸ್ಮಾರಕ ಲೋಕಾರ್ಪಣೆ ಆಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

1 / 7
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಷ್ಣುವರ್ಧನ್​ ಸ್ಮಾರಕವನ್ನು ಉದ್ಘಾಟನೆ ಮಾಡಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ಸಮ್ಮುಖದಲ್ಲಿ ಈ ಸಮಾರಂಭ ನಡೆಯಿತು. ಈ ಪ್ರಯುಕ್ತ ಫ್ಯಾನ್ಸ್​ ರಕ್ತದಾನ, ಅನ್ನದಾನ ಮುಂತಾದ ಜನಪರ ಕಾರ್ಯಕ್ರಮ ನಡೆಸಿದರು.

2 / 7
‘ನಾನು ಈ ಕಾರ್ಯಕ್ರಮಕ್ಕೆ ವಿಷ್ಣುವರ್ಧನ್​ ಅಭಿಮಾನಿಯಾಗಿ ಬಂದಿದ್ದೇನೆ. ಅವರ ಕಲೆ, ಸಾಹಸ, ಸಾಧನೆ ಎಲ್ಲವೂ ನಮ್ಮ ಕಣ್ಣ ಮುಂದಿದೆ’ ಎಂದು ಸ್ಮಾರಕ ಉದ್ಘಾಟನೆ ಬಳಿಕ ಬಸವರಾಜ​ ಬೊಮ್ಮಾಯಿ ಹೇಳಿದ್ದಾರೆ.

3 / 7
‘ಸಾಹಸ ಸಿಂಹ’ ಅವರ ಸ್ಮಾರಕ ನಿರ್ಮಾಣ ಆಗಬೇಕು ಎಂದು ಅಭಿಮಾನಿಗಳು ಮತ್ತು ಕುಟುಂಬದವರು ಹಲವು ವರ್ಷಗಳಿಂದ ಶ್ರಮಿಸುತ್ತಿದ್ದರು. ಅದಕ್ಕೆ ಹಲವು ಅಡೆತಡೆಗಳು ಕೂಡ ಉಂಟಾಗಿದ್ದವು. ಅಂತಿಮವಾಗಿ ಅವರ ಶ್ರಮಕ್ಕೆ ಫಲ ಸಿಕ್ಕಿದೆ.

4 / 7
ವಿಷ್ಣುವರ್ಧನ್​ ಸ್ಮಾರಕ ಲೋಕಾರ್ಪಣೆ ಆಗಿರುವುದಕ್ಕೆ ಅನೇಕ ಸೆಲೆಬ್ರಿಟಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಶಿವರಾಜ್​ಕುಮಾರ್​, ಕಿಚ್ಚ ಸುದೀಪ್​ ಸೇರಿದಂತೆ ಅನೇಕ ಕಲಾವಿದರು ಈ ಬಗ್ಗೆ ಟ್ವೀಟ್​ ಮಾಡುವ ಮೂಲಕ ಖುಷಿಪಟ್ಟಿದ್ದಾರೆ.

5 / 7
ಬೆಂಗಳೂರಿನ ಅಭಿಮಾನ್​ ಸ್ಟುಡಿಯೋದಲ್ಲಿ ವಿಷ್ಣುವರ್ಧನ್​ ಅವರ ಸಮಾಧಿ ಇದೆ. ಅದನ್ನು ಪುಣ್ಯಭೂಮಿ ಎಂದು ಫ್ಯಾನ್ಸ್​ ಗೌರವಿಸುತ್ತಾರೆ. ಬೆಂಗಳೂರಿನಿಂದ ಅಪಾರ ಸಂಖ್ಯೆಯ ಅಭಿಮಾನಿಗಳು ಮೈಸೂರಿಗೆ ತೆರಳಿ ಸ್ಮಾರಕದ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದಾರೆ.

6 / 7
11 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅನೇಕ ಚಟುವಟಿಕೆಗಳು ಇಲ್ಲಿ ನಡೆಯಲಿವೆ. ರಾಜ್ಯದ ಮೂಲೆ ಮೂಲೆಯಿಂದ ಬರುವ ಅಭಿಮಾನಿಗಳು ವಿಷ್ಣು ದಾದಾಗೆ ನಮನ ಸಲ್ಲಿಸುತ್ತಿದ್ದಾರೆ.

7 / 7
Follow us
ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು

ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ

ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ

ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್

ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ

ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ

ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್

ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್

‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ

ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?