- Kannada News Photo gallery Karnataka CM Siddaramaiah and DK Shivakumar offer bagina to kaveri KRS Dam mandya kannada news
KRS Dam: ಮೂರನೇ ಬಾರಿಗೆ ಕಾವೇರಿಗೆ ಬಾಗಿನ ಅರ್ಪಿಸಿದ ನಾಡದೊರೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್
ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಕಾರ ಮಳೆಯಾಗುತ್ತಿದೆ. ಹೀಗಾಗಿ ಜೀವನದಿ ಕಾವೇರಿ ಅಪಾಯದ ಮಟ್ಟವನ್ನ ಮೀರಿ ಹರಿಯುತ್ತಿದ್ದಾಳೆ. ಅಷ್ಟೇ ಅಲ್ಲ ನದಿ ತಟದಲ್ಲಿ ಪ್ರವಾಹ ಭೀತಿಯನ್ನು ಕೂಡ ಸೃಷ್ಠಿ ಮಾಡಿದ್ದಾಳೆ. ಈ ಮಧ್ಯೆ ಸಂಪೂರ್ಣ ಭರ್ತಿಯಾಗಿರೊ ಕನ್ನಂಬಾಡಿ ಅಣೆಕಟ್ಟಿಗೆ ಸಿಎಂ ಹಾಗೂ ಡಿಸಿಎಂ ಬಾಗಿನ ಅರ್ಪಿಸಿದ್ದಾರೆ.
Updated on: Jul 29, 2024 | 12:48 PM

ಕಾವೇರಿ ಜಲನಯನ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಧಾರಕಾರ ಮಳೆಯಾಗುತ್ತಿದೆ. ಮಳೆರಾಯನ ಆರ್ಭಟಕ್ಕೆ ಮಂಡ್ಯ ಜಿಲ್ಲೆ ಶ್ರೀರಂಗಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜೀವನದಿ ಕಾವೇರಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ.

ಎರಡು ವರ್ಷಗಳ ನಂತರ ಹಳೇ ಮೈಸೂರ ಭಾಗದ ಜೀವನದಿ ಕಾವೇರಿ ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೆಆರ್ಎಸ್ ಜಲಾಶಯದಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ್ದಾರೆ.

ಸಿಎಂ, ಡಿಸಿಎಂಗೆ ಸಚಿವರಾದ ಎನ್.ಚಲುವರಾಯಸ್ವಾಮಿ, ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಕಾಂಗ್ರೆಸ್ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ತನ್ವೀರ್ ಸೇಠ್, ರವಿಕುಮಾರ್ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ತಮ್ಮ ಅವಧಿಯಲ್ಲಿ ಮೂರನೇ ಬಾರಿಗೆ ಕೆಆರ್ಎಸ್ ಗೆ ಬಾಗಿನ ಅರ್ಪಿಸಿದ್ದಾರೆ. ಹೀಗಾಗಿ ಜಿಲ್ಲಾಡಳಿತ ಎಲ್ಲ ಸಿದ್ದತೆ ಮಾಡಿಕೊಂಡಿದೆ.

ಮೊದಲಿಗೆ ಸಿಎಂ ಸಿದ್ದರಾಮಯ್ಯನವರು ಬಾಗಿನಗಳಿಗೆ ಹೂ ಹಾಕಿ ಕೈ ಮುಗಿದು ಪೂಜೆ ಸಲ್ಲಿಸಿ ಬಳಿಕ ಕಾವೇರಿ ತಾಯಿಗೆ ಬಾಗಿನ ಅರ್ಪಿಸಿದರು. ಕಾವೇರಿ ಮಾತೆ ಪ್ರತಿಮೆಗೆ ಕೃಷಿ ಸಚಿವರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಪುಷ್ಪಾರ್ಚನೆ ಮಾಡಿದ್ರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ವಿಶ್ವೇಶ್ವರಯ್ಯನವರ ಹೂವಿನ ಭಾವಚಿತ್ರ ನಿರ್ಮಾಣ ಮಾಡಿದ್ದು, ಕಾವೇರಿ ಮಾತೆ ಮೂರ್ತಿ ಹಸಿರು ಚಪ್ಪರದಿಂದ ಕಂಗೊಳಿಸುತ್ತಿದೆ.

ಮೊದಲ ಬಾರಿಗೆ ಸಿಎಂ ಆದಾಗ 2013 ಹಾಗೂ 2014 ರಲ್ಲಿ ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದರು. ಆನಂತರ ಬರಗಾಲ ಹಿನ್ನೆಲೆ ಜಲಾಶಯ ಭರ್ತಿಯಾಗಿರಲಿಲ್ಲ. ಎರಡನೇ ಅವಧಿಗೂ ಸಿಎಂ ಆದಗಲೂ 2023ರಲ್ಲಿ ಕನ್ನಂಬಾಡಿ ಅಣೆಕಟ್ಟು ಭರ್ತಿಯಾಗಿರಲಿಲ್ಲ. ಈ ವರ್ಷ ಸಂಪೂರ್ಣ ಭರ್ತಿಯಾಗಿದ್ದು ಬಾಗಿನ ಅರ್ಪಿಸಿದ್ದಾರೆ.

ಕೃಷಿ ಪ್ರದೇಶಕ್ಕೆ ಅಪಾರ ನೀರನ್ನೇ ಉಣಿಸಿದ್ದಾಳೆ ಕಾವೇರಿ ತಾಯಿ. ಮಂಡ್ಯ, ಮೈಸೂರು ಭಾಗದ ಜನರಿಗೆ, ಬೆಂಗಳೂರಿಗರಿಗೆ ಜೀವ ಜಲ.




