- Kannada News Photo gallery Karnataka CM Siddaramaiah meets PM Narendra Modi On His Birthday in Delhi
Siddaramaiah Meets PM Modi: ಮೋದಿ ಭೇಟಿಯಾಗಿ ವಿಶೇಷ ಉಡುಗೊರೆ ನೀಡಿದ ಸಿದ್ದರಾಮಯ್ಯ, ಇಲ್ಲಿವೆ ಫೋಟೋಸ್
ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಇಂದು (ಆಗಸ್ಟ್ 03) ದೆಹಲಿಯ ಸಂಸತ್ ಭವನದಲ್ಲಿ ತಮ್ಮ ಜನ್ಮದಿನದಂದೇ ಪ್ರಧಾನಿಯವರನ್ನ ಭೇಟಿ ಮಾಡಿರುವುದು ವಿಶೇಷವಾಗಿದೆ. ಇನ್ನು ಇದೇ ವೇಳೆ ಸಿದ್ದರಾಮಯ್ಯ, ಮೋದಿಯವರಿಗೆ ವಿಶೇಷ ಉಡುಗೊರೆ ನೀಡಿದ್ದಾರೆ.
Updated on:Aug 03, 2023 | 2:43 PM

ತಮ್ಮ ಜನ್ಮದಿನದಂದೇ ಸಿದ್ದರಾಮಯ್ಯನವರು ಇಂದು (ಆಗಸ್ಟ್ 03) ದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮೋದಿಯವರನ್ನು ಭೇಟಿ ಮಾಡಿದ್ದು, ಇನ್ನು ಇದೇ ವೇಳೆ ಸಿದ್ದರಾಮಯ್ಯ, ಮೋದಿಯವರಿಗೆ ಮೈಸೂರು ಪೇಟ, ಶಾಲು ಹಾಗೂ ದಸರಾ ಅಂಬಾರಿಯ ಸ್ಮರಣಿಕೆ ನೀಡಿ ಗೌರವಿಸಿದರು.

ಮೋದಿ ಜೊತೆಗೆ ಐದು ನಿಮಿಷ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು.

ದೆಹಲಿಯಲ್ಲಿ ರಾಜನಾಥ್ ಸಿಂಗ್ ಭೇಟಿಯಾದ ಸಿದ್ದರಾಮಯ್ಯ ಅವರು ಈ ಬಾರಿಯ ಮೈಸೂರು ದಸರಾ ಉತ್ಸವದಲ್ಲಿ ಏರ್ಶೋ ಆಯೋಜಿಸಲು ಮನವಿ ಮಾಡಿದರು.

ಬಳಿಕ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತರಾಮನ್ ಅವರನ್ನು ಭೇಟಿಯಾದರು.

ಈ ವೇಳೆ ಸಿದ್ದರಾಮಯ್ಯ ಅವರು ಪೂರ್ತಿ ಜಿಎಸ್‌ಟಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾತುಕತೆ ನಡೆಸಿದರು ಎಂದು ತಿಳಿದುಬಂದಿದೆ.
Published On - 1:07 pm, Thu, 3 August 23




