Siddaramaiah Meets PM Modi: ಮೋದಿ ಭೇಟಿಯಾಗಿ ವಿಶೇಷ ಉಡುಗೊರೆ ನೀಡಿದ ಸಿದ್ದರಾಮಯ್ಯ, ಇಲ್ಲಿವೆ ಫೋಟೋಸ್

Updated on: Aug 03, 2023 | 2:43 PM

ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಇಂದು (ಆಗಸ್ಟ್ 03) ದೆಹಲಿಯ ಸಂಸತ್ ಭವನದಲ್ಲಿ ತಮ್ಮ ಜನ್ಮದಿನದಂದೇ ಪ್ರಧಾನಿಯವರನ್ನ ಭೇಟಿ ಮಾಡಿರುವುದು ವಿಶೇಷವಾಗಿದೆ. ಇನ್ನು ಇದೇ ವೇಳೆ ಸಿದ್ದರಾಮಯ್ಯ, ಮೋದಿಯವರಿಗೆ ವಿಶೇಷ ಉಡುಗೊರೆ ನೀಡಿದ್ದಾರೆ.

1 / 6
ತಮ್ಮ ಜನ್ಮದಿನದಂದೇ  ಸಿದ್ದರಾಮಯ್ಯನವರು ಇಂದು (ಆಗಸ್ಟ್ 03) ದೆಹಲಿಯ ಸಂಸತ್ ಭವನದಲ್ಲಿ  ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ತಮ್ಮ ಜನ್ಮದಿನದಂದೇ ಸಿದ್ದರಾಮಯ್ಯನವರು ಇಂದು (ಆಗಸ್ಟ್ 03) ದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

2 / 6

ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮೋದಿಯವರನ್ನು ಭೇಟಿ ಮಾಡಿದ್ದು, ಇನ್ನು ಇದೇ ವೇಳೆ ಸಿದ್ದರಾಮಯ್ಯ, ಮೋದಿಯವರಿಗೆ ಮೈಸೂರು ಪೇಟ, ಶಾಲು ಹಾಗೂ ದಸರಾ ಅಂಬಾರಿಯ ಸ್ಮರಣಿಕೆ ನೀಡಿ ಗೌರವಿಸಿದರು.

3 / 6

ಮೋದಿ ಜೊತೆಗೆ ಐದು ನಿಮಿಷ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು.

4 / 6

ದೆಹಲಿಯಲ್ಲಿ ರಾಜನಾಥ್ ಸಿಂಗ್ ಭೇಟಿಯಾದ ಸಿದ್ದರಾಮಯ್ಯ ಅವರು ಈ ಬಾರಿಯ ಮೈಸೂರು ದಸರಾ ಉತ್ಸವದಲ್ಲಿ ಏರ್​ಶೋ ಆಯೋಜಿಸಲು ಮನವಿ ಮಾಡಿದರು.

5 / 6

ಬಳಿಕ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತರಾಮನ್ ಅವರನ್ನು ಭೇಟಿಯಾದರು.

6 / 6

ಈ ವೇಳೆ ಸಿದ್ದರಾಮಯ್ಯ ಅವರು ಪೂರ್ತಿ ಜಿಎಸ್‌ಟಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾತುಕತೆ ನಡೆಸಿದರು ಎಂದು ತಿಳಿದುಬಂದಿದೆ.

Published On - 1:07 pm, Thu, 3 August 23

ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Loading...
Unable to load recommendations.
Follow Us