ರಾಜ್ಯಪಾಲರ ಅಂಗಳದಲ್ಲಿ MLC ನಾಮ ನಿರ್ದೇಶನದ ಚೆಂಡು, ಬಂಡಾಯಕ್ಕೆ ದಾರಿ ಮಾಡುತ್ತಾ ಸಿಎಂ ನಿರ್ಧಾರ?
ವಿಧಾನ ಪರಿಷತ್ನ ಮೂವರ ಸದಸ್ಯರ ನಾಮನಿರ್ದೇಶನ ವಿಚಾರ ರಾಜ್ಯ ಕಾಂಗ್ರೆಸ್ನಲ್ಲಿ ಹಲ್ಚಲ್ ಸೃಷ್ಟಿಸಿದೆ. ಮಾಜಿ ಸಚಿವೆ ಉಮಾಶ್ರೀ, ಸೀತಾರಾಮ್, ಸುಧಾಮ್ ದಾಸ್ ಹೆಸರು ಫೈನಲ್ ಆಗಿದ್ದು, ಪಕ್ಷದೊಳಗೆ ತೀವ್ರ ವಿರೋಧವಿದ್ದರೂ ಸಿಎಂ ಸಿದ್ದರಾಮಯ್ಯ ಮೂವರ ಪಟ್ಟಿಯನ್ನ ರಾಜಭವನಕ್ಕೆ ಪಟ್ಟಿ ರವಾನಿಸಿದ್ದಾರೆ. ಸಮಾಜಸೇವೆ ಕೋಟಾದಡಿ ಸುಧಾಮ್ ದಾಸ್‌ಗೆ ಅವಕಾಶ ನೀಡಿದ್ದರೆ, ಶಿಕ್ಷಣ ಕ್ಷೇತ್ರದ ಕೋಟಾದಡಿ ಸೀತಾರಾಂಗೆ ಸ್ಥಾನ ಕಲ್ಪಿಸಲಾಗಿದೆ. ಆದ್ರೆ, ಇವರಿಬ್ಬರ ಆಯ್ಕೆಗೆ ಕಾಂಗ್ರೆಸ್ನಲ್ಲೆ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಇವರ ವಿರುದ್ಧ ದೂರು ಸಲ್ಲಿಕೆಯಾಗಿದೆ. ಹೀಗಾಗಿ ರಾಜ್ಯಪಾಲರಿಗೆ ತೃಪ್ತಿ ತರದಿದ್ದರೇ ಇಬ್ಬರ ಹೆಸರನ್ನ ತಡೆ ಹಿಡಿಯುವ ಸಾಧ್ಯತೆ ಎನ್ನಲಾಗಿದೆ.

1 / 10

2 / 10

3 / 10

4 / 10

5 / 10

6 / 10

7 / 10

8 / 10

9 / 10

10 / 10