
4 ದಶಕಗಳ ಕಾಲ ಬಿಜೆಪಿಯಲ್ಲಿದ್ದು ಶಾಸಕ ಸಚಿವ ಸಿಎಂ ಆಗಿದ್ದ ಜಗದೀಶ್ ಶೆಟ್ಟರ್ ಬಿಜೆಪಿಯೊಂದಿಗಿನ ತಮ್ಮ ಸಂಬಂಧಕ್ಕೆ ತಿಲಾಂಜಲಿ ಹಾಡಿ ಕಾಂಗ್ರೆಸ್ ಸೇರಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಗದೀಶ್ ಶೆಟ್ಟರ್ ಅವರನ್ನು ಪಕ್ಷದ ಕಚೇರಿಯಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಂದಿದ್ದ ಜಗದೀಶ್ ಶೆಟ್ಟರ್ ಅವರು ಇಂದು ಕಾಂಗ್ರೆಸ್ ಸದಸ್ಯತ್ವ ಪಡೆದುಕೊಂಡರು.

ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಬಿ ಫಾರಂ ಪಡೆದುಕೊಂಡರು.

ಇದರೊಂದಿಗೆ ಜಗದೀಶ್ ಶೆಟ್ಟರ್ ಅವರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಕಾಂಗ್ರೆ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ

4 ದಶಕಗಳ ಕಾಲ ಬಿಜೆಪಿಯಲ್ಲಿದ್ದು ಪಕ್ಷ ಸಂಘಟನೆ ಮಾಡಿ ಹಲವು ಹುದ್ದೆಗಳನ್ನು ಅಲಂಕರಿಸಿದ್ದ ಜಗದೀಶ್ ಶೆಟ್ಟರ್ ಇದೀಗ ಅವೆಲ್ಲವೂಗಳಿಗೆ ಬೈ ಹೇಳಿ ಕಾಂಗ್ರೆಸ್ಗೆ ಜೈ ಎಂದರು.

ಸುಮಾರು ನಲವತ್ತ ವರ್ಷಗಳ ಕಾಲ ಕೇಸರಿ ಮನೆಯಲ್ಲಿ ಓಡಾಡಿಕೊಂಡಿದ್ದ ಜಗದೀಶ್ ಶೆಟ್ಟರ್ ಇದೀಗ ಖಾದಿಯಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಗುರುತಿಸಿಕೊಂಡರು.