

ಕೋಲಾರದ ಮುಳುಬಾಗಿಲಿಗೆ ಪ್ರಯಾಣಿಸುವ ವೇಳೆ ಈ ಅವಘಡ ಸಂಭವಿಸಿದ್ದು, ತಕ್ಷಣ ಎಚ್ಚೆತ್ತ ಪೈಲೆಟ್ ಹೆಚ್ಎಎಲ್ ಏರ್ಪೋರ್ಟ್ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ.

ರಣಹದ್ದು ಡಿಕ್ಕಿ ಹೊಡೆದ ಪರಿಣಾಮ ಹೆಲಿಕಾಪ್ಟರ್ ವಿಂಡೋ ಗ್ಲಾಸ್ ಪುಡಿಪುಡಿಯಾಗಿದೆ.

ಜಕ್ಕೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿಯಾದ ಪರಿಣಾಮ ಗಾಜು ಒಡೆದಿದ್ದು ಯಾವುದೇ ಅನಾಹುತ ಸಂಭವಿಸದಂತೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ಕಾಂಗ್ರೆಸ್ ಟ್ವಿಟ್ಟರ್ ಮೂಲಕ ತಿಳಿಸಿದೆ.


Published On - 2:55 pm, Tue, 2 May 23