AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ರಾಜಕಾರಣದಲ್ಲೊಂದು ಅಚ್ಚರಿಯ ಬೆಳವಣಿಗೆ; ಡಿಕೆ ಶಿವಕುಮಾರ್, ಯಡಿಯೂರಪ್ಪ ಭೇಟಿಯ ಗುಟ್ಟೇನು?

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್ ಅವರು ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದು ಸೌಜನ್ಯದ ಭೇಟಿ ಎಂದು ಹೇಳಲಾಗಿದ್ದರೂ ರಾಜಕೀಯ ಪಡಸಾಲೆಯಲ್ಲಿ ಅನೇಕ ರೀತಿಯ ಚರ್ಚೆಗೆ ಕಾರಣವಾಗಿದೆ.

Ganapathi Sharma
|

Updated on: Jun 01, 2023 | 10:55 PM

Share
Karnataka DCM DK Shivakumar meets BJP veteron BS Yediyurappa what is the political calculation behind this

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್​ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಕೆಲ ಕಾಲ ಅವರ ಜತೆ ಮಾತುಕತೆ ನಡೆಸಿದರು.

1 / 5
Karnataka DCM DK Shivakumar meets BJP veteron BS Yediyurappa what is the political calculation behind this

ಸ್ವತಃ ಯಡಿಯೂರಪ್ಪ ಅವರೇ ಹೊರ ಬಂದು ಡಿಕೆ ಶಿವಕುಮಾರ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ನಂತರ ಉಭಯ ನಾಯಕರು ತುಸು ಹೊತ್ತು ಕುಶಲೋಪರಿ ಮಾತನಾಡಿದರು. ಬಳಿಕ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

2 / 5
Karnataka DCM DK Shivakumar meets BJP veteron BS Yediyurappa what is the political calculation behind this

ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ಈಗಾಗಲೇ ಬಿಬಿಎಂಪಿ ಅಧಿಕಾರಿಗಳ ಜತೆ ಕೆಲವು ಸುತ್ತಿನ ಸಭೆ ನಡೆಸಿದ್ದು, ರಾಜ್ಯ ರಾಜಧಾನಿಯಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದು, ಅಭಿವೃದ್ಧಿ ವಿಷಯವಾಗಿ ಸಲಹೆ ಕೇಳಿರುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

3 / 5
Karnataka DCM DK Shivakumar meets BJP veteron BS Yediyurappa what is the political calculation behind this

ಚುನಾವಣಾಪೂರ್ವದಲ್ಲಿ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳ ಜಾರಿಯೂ ಆಡಳಿತ ಪಕ್ಷಕ್ಕೀಗ ಸವಾಲಾಗಿ ಪರಿಣಮಿಸಿದೆ. ಗ್ಯಾರಂಟಿ ಜಾರಿ ಸಂಬಂಧಿತ ಹಲವು ಸುತ್ತಿನ ಸಭೆಗಳ ಬಳಿಕ ಡಿಕೆಶಿ ಅವರು ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿರುವುದು ಗಮನಾರ್ಹವಾಗಿದೆ.

4 / 5
Karnataka DCM DK Shivakumar meets BJP veteron BS Yediyurappa what is the political calculation behind this

ಬಿಬಿಎಂಪಿಗೆ ಚುನಾವಣೆಯೂ ನಡೆಯಬೇಕಿದೆ. ಆದಷ್ಟು ಬೇಗ ಚುನಾವಣೆ ನಡೆಸಲಾಗುವುದು ಎಂದು ಆಡಳಿತ ಪಕ್ಷ ಹೇಳಿದೆ. ಆದಾಗ್ಯೂ, ವಾರ್ಡ್ ವಿಂಗಡಣೆ ಬಗ್ಗೆ ಕಾಂಗ್ರೆಸ್ ಒಲವು ಹೊಂದಿದೆ ಎನ್ನಲಾಗಿದ್ದು, ಇದರಿಂದಾಗಿ ಚುನಾವಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯೂ ಇದೆ. ಈ ಎಲ್ಲ ಬೆಳವಣಿಗೆಗಳ ಸಂದರ್ಭದಲ್ಲೇ ಡಿಕೆ ಶಿವಕುಮಾರ್ ಅವರು ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಆದರೆ ಭೇಟಿಯ ಪ್ರಮುಖ ಉದ್ದೇಶ ಏನೆಂದು ಇನ್ನೂ ತಿಳಿದುಬಂದಿಲ್ಲ. ಸೌಜನ್ಯದ ಭೇಟಿ ಎಂದಷ್ಟೇ ಹೇಳಲಾಗಿದ್ದರೂ ಇದರ ಹಿಂದೆ ರಾಜಕೀಯ ಲೆಕ್ಕಾಚಾರಗಳಿರುವ ಸಾಧ್ಯತೆ ಇದೆ ಎಂಬ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ