- Kannada News Photo gallery Karnataka elections 2023 BJP Former MLAs And leaders jumping Congress And JDS
ಚುನಾವಣೆ ಹೊಸ್ತಿಲಲ್ಲೇ ಕೇಸರಿ ಪಡೆಯಲ್ಲಿ ಪಕ್ಷಾಂತರ ಪರ್ವ: ಒಬ್ಬರಿಂದೊಬ್ಬರು ಕೈ-ತೆನೆಯತ್ತ ಬಿಜೆಪಿ ಮಾಜಿ ಶಾಸಕರು, ಇಲ್ಲಿದೆ ಪಟ್ಟಿ
ಧಾನಸಭಾ ಕ್ಷೇತ್ರದ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಟಿಕೆಟ್ಗಾಗಿ ಪಕ್ಷದ ಅಭ್ಯರ್ಥಿಗಳ ಮಧ್ಯೆ ಈಗಾಗಲೇ ಹಗ್ಗಜಗ್ಗಾಟ ಜೋರಾಗಿದ್ದು, ಕೆಲವರು ಟಿಕೆಟ್ ಸಿಗಲ್ಲ ಎಂದು ಕಾತರಿಯಾಗುತ್ತಿದ್ದಂತೆ ಒಂದು ಪಕ್ಷದಿಂದ ಮತ್ತೊಂದು ಪಕ್ಷದತ್ತೆ ವಲಸೆ ಹೋಗುತ್ತಿದ್ದಾರೆ. ಅದರಲ್ಲೂ ಮುಖ್ಯವಾಗಿ ಆಡಳಿರೂಢ ಬಿಜೆಪಿ ಪಕ್ಷದ ಮಾಜಿ ಶಾಸಕರು, ನಾಯಕರುಗಳು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಸೇರ್ಪಡೆಯಾಗುತ್ತಿದ್ದಾರೆ.
Updated on: Feb 19, 2023 | 4:39 PM

ಹುಬ್ಬಳ್ಳಿ-ಧಾರವಾಡ ಪೂರ್ವ ಮಾಜಿ ಶಾಸಕ ವೀರಭದ್ರಪ್ಙ ಹಾಲರವಿ (Former MLA Veerabhadrappa) ಅವರು ಇಂದು ಬಿಜೆಪಿ ತೊರೆದು ಜೆಡಿಎಸ್ಗೆ ಸೇರ್ಪಡೆಯಾದರು. ಬೆಂಗಳೂರಿನ ಜೆಪಿ ಭವನದಲ್ಲಿ ಹೆಚ್ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ವೀರಭದ್ರಪ್ಙ ಹಾಲರವಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಇನ್ನು ಬಿಜೆಪಿ ಮಾಜಿ ಶಾಸಕ, ಆರ್ಎಸ್ಎಸ್ ಕಟ್ಟಾಳು ಕಿರಣ್ ಕುಮಾರ್ ಕಾಂಗ್ರೆಸ್(Congress) ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ನಿನ್ನೆ ಅಷ್ಟೇ ತಮ್ಮ ಜೈವಿಕ ಇಂಧನ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಿರಣ್ ಕುಮಾರ್, ನಾಳೆ (ಫೆ.20) ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ. ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕೈ ಹಿಡಿಯಲಿದ್ದಾರೆ.

ಯೆಸ್...ಈ ಬಾರಿ ಚುನಾವಣೆಯಲ್ಲಿ ಹಳೇ ಮೈಸೂರು ಭಾಗವನ್ನು ಬಿಜೆಪಿ ಟಾರ್ಗೆಟ್ ಮಾಡಿದೆ. ಹೀಗಾಗಿ ಇಲ್ಲಿ ನೆಲೆ ಕಂಡುಕೊಳ್ಳಲು ಬಿಜೆಪಿ ನಾಯಕರು ಬೇರೆ-ಬೇರೆ ಪಕ್ಷದ ನಾಯಕರಿಗೆ ಗಾಳ ಹಾಕುತ್ತಿದ್ದಾರೆ. ಆದ್ರೆ, ಮೈಸೂರು ಭಾಗದಲ್ಲಿ ಬಿಜೆಪಿ ಮತ್ತೊಂದು ವಿಕೆಟ್ ಪತನವಾಗಿದ್ದು, ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಅವರು ಕಾಂಗ್ರೆಸ್ ಸೇರಲು ಸಿದ್ದರಾಗಿದ್ದಾರೆ. ನಾಳೆ(ಫೆ.20) ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಚಿಕ್ಕಮಗಳೂರು ಲಿಂಗಾಯತ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅತ್ಯಾಪ್ತ, ಬಿಜೆಪಿ ಜಿಲ್ಲಾ ಪ್ರಕೋಷ್ಟಗಳ ಸಂಯೋಜಕ ಹೆಚ್. ಡಿ ತಿಮ್ಮಯ್ಯ (HD Thimayya) ಬಿಜೆಪಿಗೆ ಗುಡ್ ಬೈ ಹೇಳಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು (ಫೆ.19) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಹೆಚ್.ಡಿ.ತಮ್ಮಯ್ಯ ಕಾಂಗ್ರೆಸ್ ಸೇರಿದರು.

ಸದ್ಯಕ್ಕೆ ಬಿಜೆಪಿದಿಂದ ಇಷ್ಟು ನಾಯಕರು ಜೆಡಿಎಸ್ ಹಾಗೂ ಕಾಂಗ್ರೆಸ್ನತ್ತ ಮುಖ ಮಾಡಿದ್ದು, ಮುಂದೆ ಚುನಾವಣೆ ಸಮಯದಲ್ಲಿ ಇನ್ನಷ್ಟು ನಾಯಕರು ಕೈ ಹಿಡಿಯಲಿದ್ದಾರೆ. ಈ ಬಗ್ಗೆ ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ದತೆಗಳು ಆರಂಭಗೊಂಡಂತೆ ಪಕ್ಷಾಂತರ ಚಟುವಟಿಕೆಗಳು ಕೂಡಾ ಬಿರುಸು ಪಡೆದಿದೆ. ಮಾಜಿ ಶಾಸಕರುಗಳು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಸೇರ್ಪಡೆಯಾಗುತ್ತಿರುವುದು ಆಡಳಿತರೂಢ ಬಿಜೆಪಿಗೆ ಆರಂಭಿಕ ಆಘಾತ ಎದುರಾಗಿದೆ.




