ಕುವೆಂಪುಗೆ ಮರಣೋತ್ತರ ‘ಭಾರತ ರತ್ನ’ ನೀಡಲು ರಾಜ್ಯ ಸರ್ಕಾರ ಶಿಫಾರಸು

Updated on: Sep 11, 2025 | 8:26 PM

ಸಂಪುಟ ಸಭೆ ಬಳಿಕ ಕೆಲವು ಮಹತ್ವದ ಘೋಷಣೆಗಳನ್ನು ಇಂದು (ಸೆಪ್ಟೆಂಬರ್ 11) ಮಾಡಲಾಯಿತು. ಸಾಹಿತಿ ಕುವೆಂಪು ಅವರಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿಷ್ಣುವರ್ಧನ್, ಬಿ. ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಲಾಗಿದೆ.

1 / 5
ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಕುವೆಂಪು ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ಸಿಗಬೇಕು ಎಂಬುದು ಓದುಗರು ಮತ್ತು ಅಭಿಮಾನಿಗಳ ಆಸೆ. ಆ ಬಗ್ಗೆ ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.

2 / 5
ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (ಕುವೆಂಪು) ಅವರಿಗೆ ‘ಭಾರತ ರತ್ನ’ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಲು ನಿರ್ಧರಿಸಿದೆ ಎಂದು ಸಚಿವ ಹೆಚ್​​.ಕೆ. ಪಾಟೀಲ್ ಅವರು ತಿಳಿಸಿದ್ದಾರೆ.

3 / 5
ಮರಣೋತ್ತರವಾಗಿ ಕುವೆಂಪು ಅವರಿಗೆ ‘ಭಾರತ ರತ್ನ’ ಪ್ರಶಸ್ತಿಯನ್ನು ನೀಡುವಂತೆ ಶಿಫಾರಸು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಮೊದಲೇ ಹಿರಿಯ ಸಾಹಿತಿಗಳು ಮನವಿ ಸಲ್ಲಿಸಿದ್ದರು.

4 / 5
ರಾಷ್ಟ್ರಕವಿ ಕುವೆಂಪು ಅವರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿರುವ ಕೊಡುಗೆ ಅಪಾರ. ಕರ್ನಾಟಕ ರತ್ನ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪಂಪ ಪ್ರಶಸ್ತಿ ಸೇರಿದಂತೆ ಹಲವಾರು ಗೌರವಗಳು ಅವರಿಗೆ ಸಂದಿವೆ.

5 / 5
ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಕುಟುಂಬದವರು ಹಾಗೂ ಅಭಿಮಾನಿಗಳು ಮನವಿ ಮಾಡಿದ್ದರು. ಆ ಬೆನ್ನಲ್ಲೇ ಸರ್ಕಾರ ಪ್ರಶಸ್ತಿ ಘೋಷಣೆ ಮಾಡಿದೆ.