ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿದರಿ ವಸ್ತುಗಳನ್ನು ಸಾವಿರಾರು ರೂಪಾಯಿ ಕೊಟ್ಟು ಖರೀದಿ ಮಾಡುತ್ತಾರೆ. ಗೋಬೆಗಳು, ಬಳೆಗಳು, ಕೀ ಚೈನ್, ಮಹಾತ್ಮರ ಮೂರ್ತಿಗಳು, ದೇವರ ವಿಗ್ರಹಗಳನ್ನು ತಾಮ್ರ ಹಾಗೂ ಸತುಗಳಿಂದ ತಯಾರಿಸಿ ಅದರ ಮೇಲೆ ಕೆತ್ತನೆಯನ್ನು ಮಾಡಲಾಗುತ್ತದೆ. ಈ ಕೆತ್ತನೆಯ ಅತ್ಯಂತ ಸೂಕ್ಷ್ಮ ರೀತಿಯಿಂದ ಕೂಡಿದ್ದಾಗಿದ್ದು ಸ್ವಲ್ಪ ಯಾಮಾರಿದರೂ ಇಡೀ ವಸ್ತು ಹಾಳಾಗಿ ಹೋಗುತ್ತದೆ.