ಮೋದಿ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆದ ಕರ್ನಾಟಕ ಸಂಸದರು
ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಅವರು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು(ಜೂ,09) ಸಂಜೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅದರಂತೆ ಕರ್ನಾಟಕದಿಂದ ನಾಲ್ವರು ಸಂಸದರಿಗೆ ಸಚಿವ ಭಾಗ್ಯ ಒಲಿದಿದ್ದು, ಈ ಕುರಿತು ಒಂದು ವರದಿ ಇಲ್ಲಿದೆ.
1 / 5
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು(ಜೂ,09) ಸಂಜೆ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅದರಂತೆ ಕರ್ನಾಟಕದಿಂದ ನಾಲ್ವರು ಸಂಸದರಿಗೆ ಸಚಿವ ಭಾಗ್ಯ ಒಲಿದಿದ್ದು, ಈ ಕುರಿತು ಒಂದು ವರದಿ ಇಲ್ಲಿದೆ.
2 / 5
ವಿ ಸೋಮಣ್ಣ ಅವರು ಇಂದು(ಜೂ.09) ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಸತತ ಸೋಲಿನ ಬಳಿಕ ಬಿಜೆಪಿ ಇವರಿಗೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಿತ್ತು. ಅದರಂತೆ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ವಿ. ಸೋಮಣ್ಣ ಅವರು ಈ ಬಾರಿ ಗೆದ್ದಿದ್ದರು. ಇದೀಗ ರಾಜ್ಯ ಖಾತೆ ಸಚಿವರಾಗಿದ್ದಾರೆ.
3 / 5
ಪ್ರಾದೇಶಿಕ ಪಕ್ಷವಾದ ಜೆಡಿಎಸ್ ನಿಂದ ಗೆದ್ದು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಹೆಚ್ ಡಿ ಕುಮಾರಸ್ವಾಮಿ ಅವರು ಈ ಬಾರಿ ಬಿಜೆಪಿವೊಂದಿಗೆ ಮೈತ್ರಿ ಮಾಡಿಕೊಂಡು ಮಂಡ್ಯದಿಂದ ಕಣಕ್ಕೀಳಿದು ಗೆದ್ದಿದ್ದರು. ಇದೀಗ ಮೊದಲ ಬಾರಿಗೆ ಮೋದಿ ನೇತೃತ್ವದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
4 / 5
ಧಾರವಾಡ ಲೋಕಸಭಾ ಕ್ಷೇತ್ರದಿಂದ ಐದನೇ ಬಾರಿ ಗೆಲ್ಲುವ ಮೂಲಕ ಹಿಡಿತ ಸಾಧಿಸಿದ ಪ್ರಹ್ಲಾದ್ ಜೋಶಿ ಅವರು ಇಂದು(ಜೂ.09) ಕೇಂದ್ರ ಸಚಿವ ಸಂಪುಟದಲ್ಲಿ ಮತ್ತೆ ಮಂತ್ರಿಯಾಗಿ ಪ್ರಮಾಣವಚನ ಮಾಡಿದರು.
5 / 5
ಬೆಂಗಳೂರು ಉತ್ತರದಿಂದ ಮೊದಲ ಬಾರಿಗೆ ಸ್ಫರ್ಧಿಸಿ ಗೆದ್ದಿರುವ ಶೋಭಾ ಕರಂದ್ಲಾಜೆ ಅವರು ಮೋದಿ ಅವರ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಕಳೆದ ಬಾರಿ ಉಡುಪಿ-ಚಿಕ್ಕಮಗಳೂರಿನಿಂದ ಗೆದ್ದು ಮಂತ್ರಿಯಾಗಿದ್ದರು.