ಜನವರಿ 22ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಅದ್ಧೂರಿಯಾಗಿ ನಡೆಯಿತು.
ಶೃಂಗೇರಿಯ ಋತ್ವಿಜರು ಹಾಗೂ ಪುರೋಹಿತರು ಜನವರಿ 22ರಂದು ನಡೆದಿದ್ದ ಅಯೋಧ್ಯೆಯ ರಾಮನ ಪ್ರಾಣಪ್ರತಿಷ್ಠಾಪನೆ ದಿನ ಅಯೋಧ್ಯೆಯ ಧಾರ್ಮಿಕ ಕಾರ್ಯಕ್ರಮ ಹಾಗೂ ವಿಧಿ-ವಿಧಾನಗಳಲ್ಲಿ ಪಾಲ್ಗೊಂಡಿದ್ದರು. ಅಷ್ಟೇ ಅಲ್ಲ, ಅಯೋಧ್ಯೆ ರಾಮನ ಜಲಾಭಿಷೇಕಕ್ಕೆಂದು ಶೃಂಗೇರಿ ಶಾರದಾಂಭೆ ನೆಲೆಸಿರೋ ತುಂಗಾ ನದಿಯಿಂದಲೂ ಜಲವನ್ನ ಕೊಂಡೊಯ್ದಿದ್ದರು.
ಅದರಲ್ಲೂ ಶ್ರೀರಾಮನ ಮೂರ್ತಿಯನ್ನ ಕರ್ನಾಟಕದ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವುದು ನಮ್ಮೆಲ್ಲರ ಹೆಮ್ಮೆ.
ಹೀಗಿರುವಾಗ ಅಯೋಧ್ಯೆ ಶ್ರೀರಾಮನಿಗೆ ಆಂಧ್ರಪ್ರದೇಶ ಮೂಲದ ರಾಮನ ಭಕ್ತರಾದಂತಹಾ ಚಲ್ಲಾ ಶ್ರೀನಿವಾಸ್ ಎಂಬ ಭಕ್ತರು ಅಯೋಧ್ಯೆಯ ರಾಮನಿಗೆ ಭಕ್ತಿ ಪೂರ್ವಕವಾಗಿ ಬೆಳ್ಳಿಯ ಬಿಲ್ಲು ಬಾಣವನ್ನ ನೀಡಿದ್ದಾರೆ.
ಅತ್ಯಂತ ಸುಂದರ ಹಾಗೂ ಮನಮೋಹಕವಾದ ಬೆಳ್ಳೆಯ ಬಿಲ್ಲು-ಬಾಣವನ್ನ ಇಂದು ಶೃಂಗೇರಿ ಶ್ರೀಗಳಿಂದ ಆಶೀರ್ವದಿಸಿದರು. ನಂತರ ಅಯೋಧ್ಯೆಗೆ ರವಾನೆ ಮಾಡಲಿದ್ದಾರೆ.
ಶೃಂಗೇರಿ ಹಿರಿಯ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿ ಅವರು ಪೂಜೆ ಸಲ್ಲಿಸಿದರೆ, ಕಿರಿಯ ಗುರುಗಳಾದ ಮಿಧುಶೇಖರ ಶ್ರೀಗಳು ಬೆಳ್ಳಿಯ ಬಿಲ್ಲು-ಬಾಣವನ್ನ ಕೈಯಲ್ಲಿ ಹಿಡಿದು ನೋಡಿದರು.
Published On - 5:38 pm, Thu, 23 May 24