- Kannada News Photo gallery Karnataka rain: Heavy rain to continue in various parts of Karnataka today taja suddi
Rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದುವರೆದ ಮಳೆ ಆರ್ಭಟ: ಧಾರಾಕಾರ ಮಳೆಗೆ ಜನರು ಸುಸ್ತೋ ಸುಸ್ತು
ಕರ್ನಾಟಕ ರಾಜ್ಯದಲ್ಲಿ ಇಂದು ವ್ಯಾಪಕ ಮಳೆಯಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ 11ರವರೆಗೆ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಆಗಲಿದೆ. ಹಾಗಾದ್ರೆ ಇಂದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ ಆಗಿದೆ ಇಲ್ಲಿದೆ ಮಾಹಿತಿ.
Updated on: Jun 08, 2024 | 9:46 PM

ಕರ್ನಾಟಕ ರಾಜ್ಯದಲ್ಲಿ ಇಂದು ವ್ಯಾಪಕ ಮಳೆಯಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ 11ರವರೆಗೆ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಆಗಲಿದೆ. ಹಾಗಾದ್ರೆ ಇಂದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ ಆಗಿದೆ ಇಲ್ಲಿದೆ ಮಾಹಿತಿ.

ಬೆಳಗಾವಿ ಜಿಲ್ಲೆಯಾದ್ಯಂತ ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ನಗರದ ಗ್ಲೋಬ್ ಚಿತ್ರಮಂದಿರಕ್ಕೆ ಮಳೆ ನೀರು ನುಗ್ಗಿತ್ತು. ಚಿತ್ರಮಂದಿರದ ಟಿಕೆಟ್ ಕೌಂಟರ್, ಪಾರ್ಕಿಂಗ್ ಸ್ಥಳ ಜಲಾವೃತವಾಗಿತ್ತು. ಬೆಳಗಾವಿಯ ಖಾನಾಪುರ ರಸ್ತೆ ಮೇಲೆ 2 ಅಡಿಯಷ್ಟು ನೀರು ನಿಂತಿದ್ದರಿಂದ ಸಂಚಾರ ದಟ್ಟಣೆ, ಸವಾರರ ಪರದಾಡಿದ್ದಾರೆ. ವಿಜಯಪುರ, ಕಲಬುರಗಿಯಲ್ಲೂ ಇಂದು ಧಾರಾಕಾರ ಮಳೆ ಸುರಿದಿದೆ.

ಬೀದರ್ ಪಟ್ಟಣದಲ್ಲಿ ಅರ್ಧಗಂಟೆ ಭಾರೀ ಮಳೆ ಸುರಿದಿದೆ. ಮಳೆಯಿಂದಾಗಿ ರಸ್ತೆ ತುಂಬೆಲ್ಲ ನೀರು ತುಂಬಿಕೊಂಡಿದ್ದು ವಾಹನ ಸವಾರರು ಪರದಾಡಿದ್ದಾರೆ. ಇತ್ತ ತರಕಾರಿ ಅಂಗಡಿಗಳಿಗೆ ನುಗ್ಗಿದ ಮಳೆ ನೀರು ತರಕಾರಿ ನೀರು ಪಾಲಾಗಿದೆ. ಓಲ್ಡ್ ಆರ್ಟಿಓ ಕಚೇರಿ ಬಳಿ ರಸ್ತೆಯಲ್ಲಿ ನೀರು ತುಂಬಿ ಹರಿದಿದೆ.

ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಭಾರೀ ಮಳೆ ಅಬ್ಬರಿಸಿದೆ. ಕೇವಲ ಅರ್ಧ ಗಂಟೆ ಸುರಿದ ನಿರಂತರ ಮಳೆಗೆ ರಸ್ತೆ ಜಲಾವೃತವಾಗಿದ್ದು ಜನರು ಹಾಗೂ ವಾಹನ ಸವಾರರು ಪರದಾಡಿದ್ದಾರೆ.

ಮಂಗಳೂರು ನಗರ ಸೇರಿದಂತೆ ವಿವಿಧೆಡೆ ಭಾರೀ ಮಳೆ ಆರ್ಭಟಿಸಿದ್ದು, ನಗರ ಹೊರವಲಯದ ತೊಕ್ಕೊಟ್ಟು ಫ್ಲೈ ಓವರ್ ಕೆಳಭಾಗದ ರಸ್ತೆಗೆ ಮಳೆ ನೀರು ನುಗ್ಗಿದೆ. ಅವೈಜ್ಞಾನಿಕ ಚರಂಡಿಯಿಂದ ರಸ್ತೆಗೆ ನುಗ್ಗಿದ್ದು, ಅರ್ಧ ಗಂಟೆ ಸುರಿದ ಭಾರೀ ಮಳೆಗೆ ರಸ್ತೆಗಳು ಹೊಳೆಯಂತಾಗಿದ್ದವು.

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಭರ್ಜರಿ ಮಳೆ ಆಗಿದೆ. ಸುಮಾರು ಅರ್ಧಗಂಟೆ ಮಳೆ ಸುರಿದಿದೆ. ಪರಿಣಾಮ ಜನ ಜೀವನ ಅಸ್ತವ್ಯಸ್ತವಾಗಿದೆ. ಕಳೆದ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಇಂದು ಮತ್ತೆ ಆಗಮಿಸುವ ಮೂಲಕ ವಾಣಿಜ್ಯ ನಗರಿ ಮಲೆನಾಡಿನಂತಾಗಿದೆ.




