Karnataka Weather: ಚಂಡಮಾರುತ ಪರಿಣಾಮ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ 5 ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ

|

Updated on: Apr 26, 2023 | 7:57 AM

ತಮಿಳುನಾಡಿನಲ್ಲಿ ಚಂಡಮಾರುತ ಸಂಭವಿಸುವ ಸಾಧ್ಯತೆ ಇದ್ದು, ಮುಂದಿನ 5 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

1 / 6

2 / 6
ತಮಿಳುನಾಡಿನ ದಕ್ಷಿಣ ಕರಾವಳಿ ಭಾಗದಲ್ಲಿ ಸೃಷ್ಟಿಯಾಗಿದ್ದ ಸಮುದ್ರದ ಮೇಲ್ಮೈ ಸುಳಿಗಾಗಿ ಸೈಕ್ಲೋನ್ ರೂಪ ಪಡೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ. ಈ ಕಾರಣದಿಂದ ಮುಂದಿನ ಐದು ದಿನ ಅಂದರೆ ಏಪ್ರಿಲ್ 30ರವರೆಗೆ ಕರ್ನಾಟಕದಲ್ಲಿ ಹೆಚ್ಚಿನ ಮಳೆ ಸುರಿಯುವ ಸಾಧ್ಯತೆ ಇದೆ.

3 / 6
ಮಳೆಯಾಗಿರುವ ಪ್ರದೇಶಗಳು: ಕುಣಿಗಲ್, ಸರಗೂರು, ಕೋಣನೂರು, ಮದ್ದೂರು, ಚಿಕ್ಕನಾಯಕನಹಳ್ಳಿ, ಸಿರಾ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ.

4 / 6
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

5 / 6
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

6 / 6
ಯೆಲ್ಲೋ ಅಲರ್ಟ್​: ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಗಳು ಭಾರೀ ಮಳೆಯ ಕಾರಣಕ್ಕೆ ಏಪ್ರಿಲ್ 26 ಮತ್ತು 29ರಂದು ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದ ದಿನಗಳಲ್ಲಿ ಈ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಾಧಾರಣದಿಂದ ಉತ್ತಮ ಮಳೆ ನಿರೀಕ್ಷಿಸಬಹುದಾಗಿದೆ.