- Kannada News Photo gallery Karnataka's Three people Died in Car Plunges into Well at Annamayya District
ಆಂಧ್ರ ಪ್ರದೇಶದಲ್ಲಿ ಬಾವಿಗೆ ಬಿದ್ದ ಕಾರು: ಕರ್ನಾಟಕದ ಮೂವರು ದುರ್ಮಣ
ತೆಲಂಗಾಣದ ಐತಿಹಾಸಿಕ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಭಾನುವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಈ ಚಾರ್ಮಿನಾರ್ (CharMinar) ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿರುವ ಕುರಿತು ಮಾಹಿತಿ ಲಭ್ಯವಾಗಿದೆ. 8 ಕುಟುಂಬದ ಮಕ್ಕಳು ಸೇರಿದಂತೆ ಒಟ್ಟು 17 ಮಂದಿ ಸಜೀವ ದಹನವಾಗಿದ್ದಾರೆ ಎಂದು ತಿಳಿದುಬಂದಿದೆ. ಇದರ ಮಧ್ಯ ಆಂಧ್ರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಕಾರು ಬಾವಿಗೆ ಬಿದ್ದಿದ್ದು, ಈ ದುರ್ಘಟನೆಯಲ್ಲಿ ಕರ್ನಾಟಕ ಮೂವರು ಮೃತಪಟ್ಟಿದ್ದಾರೆ.
Updated on: May 18, 2025 | 4:29 PM

ಆಂಧ್ರ ಪ್ರದೇಶದಲ್ಲಿ ಕಾರು ಬಾವಿಗೆ ಉರುಳಿಬಿದ್ದಿದ್ದು, ಈ ಘಟನೆಯಲ್ಲಿ ಕರ್ನಾಟಕದ ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆ ಆಂಧ್ರದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿ ನಡೆದಿದೆ.

ಚಿಂತಾಮಣಿ ತಾಲೂಕಿನ ಮುತ್ತಕದಲ್ಲಿ ಗ್ರಾಮದ ನಿವಾಸಿಗಳಾದ ಲೊಕೇಶ(34), ಚಂದನಹಳ್ಳಿ ಗ್ರಾಮದ ಶಿವಾನಂದ, ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಚಲಪತಿ ಮೃತರು. ಇನ್ನು ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾದಿಂದ ಪಾರಾಗಿದ್ದಾರೆ.

ಅಡುಗೆ ಕೆಲಸಕ್ಕೆಂದು ಕಾರಿನಲ್ಲಿ ಹೋಗುತ್ತಿದ್ದರು. ಆ ವೇಳೆ ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿಯ ಬಾವಿಗೆ ಕಾರು ಬಿದ್ದಿದೆ. ಪಿಲೇರು ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ಸಂಭವಿಸಿದೆ.

ಅಡುಗೆ ಕೆಲಸಕ್ಕಾಗಿ ಕಾರಿನಲ್ಲಿ ಒಟ್ಟು ಐವರು ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಚಿಂತಾಮಣಿ ಮೂಲಕ ಐವರು ಮೃತಪಟ್ಟಿದ್ದಾರೆ. ಇನ್ನುಳಿದ ಇಬ್ಬರು ಬಚಾವ್ ಆಗಿದ್ದಾರೆ.

ಬಾವಿ ಆಳವಾಗಿದ್ದರಿಂದ ಕಾರೊನೊಳಗೆ ಮೂವರು ಮೃತಪಟ್ಟಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಸ್ಥಳೀಯರು, ಪೊಲೀಸರು ಸೇರಿ ಬಾವಿಯಲ್ಲಿ ಬಿದ್ದಿದ್ದ ಕಾರನ್ನು ಮೇಲಕ್ಕೆತ್ತಿದರು.

ಮೊದಲಿಗೆ ಸ್ಥಳೀಯರು ಅಗ್ಗಗಳನ್ನು ಹಾಕಿ ಕಾರನ್ನು ಮೇಲೆತ್ತಲು ಪ್ರಯತ್ನಿಸಿದರು. ಆದ್ರೆ ಅದು ಸಾಧ್ಯವಾಗಿಲ್ಲ. ಬಳಿಕ ಕ್ರೇನ್ ಮೂಲಕ ಬಾವಿಯೊಳಗಿದ್ದ ಕಾರನ್ನು ಹೊರತೆಗೆಲಾಯ್ತು.




